ಬರಪೀಡಿತ ಪಟ್ಟಿಗೆ 9 ಹೊಸ ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ, ಪರಮೇಶ್ವರ್ ಹೇಳಿದ್ದಿಷ್ಟು
ಮುಖ್ಯಾಂಶಗಳು
- ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರ
- ಬರಪೀಡಿತ ಪಟ್ಟಿಗೆ 9 ಹೊಸ ತಾಲೂಕುಗಳ ಸೇರ್ಪಡೆ
- ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ
ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಈಗಾಗಲೇ 19 ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 9 ತಾಲೂಕುಗಳನ್ನು ಸೇರಿಸಲಾಗಿದೆ. ಇದರಿಂದ ರಾಜ್ಯದ ಒಟ್ಟು 226 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿವೆ. ಅಂದಾಜು 60,000 ಕೋಟಿ ರೂ ಬೆಳೆ ನಷ್ಟವಾಗಿದ್ದು, NDRF ಮಾರ್ಗಸೂಚಿಗಳ ಅಡಿಯಲ್ಲಿ 18,000-20,000 ಕೋಟಿ ರೂ ಕೇಂದ್ರದಿಂದ ಪರಿಹಾರ ನಿರೀಕ್ಷಿಸಲಾಗಿದೆ.
ಬೆಂಗಳೂರು, ಅಕ್ಟೋಬರ್ 15: ‘ಕರ್ನಾಟಕ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೆಚ್ಚುವರಿಯಾಗಿ 9 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಸಂಖ್ಯೆ 226ಕ್ಕೆ ಏರಿಕೆ ಆಗಿದೆ. ಕರಾವಳಿಯ 5, ಮಲೆನಾಡಿನ 3 ಮತ್ತು ಬೆಳಗಾವಿಯ 1 ತಾಲೂಕುಗಳನ್ನ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇನ್ನೂ ಕೆಲವು ತಾಲೂಕುಗಳಲ್ಲಿನ ಪರಿಸ್ಥಿತಿ ಪರಿಶೀಲಿಸಲು ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಮುಂದುವರಿದಿದೆ. ಟ್ರಿಗರ್ ಒನ್ ಮಾನದಂಡಗಳ ಅಡಿಯಲ್ಲಿ ಅರ್ಹತೆ ಪಡೆದರೆ, ಇನ್ನೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು’ ಎಂದು ಡಾ. ಪರಮೇಶ್ವರ್ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
