ರಾಮನಗರ: ಬಿಜೆಪಿ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿದ ಮಾಜಿ ಸಚಿವ ಎ ಮಂಜು
ಬಿಜೆಪಿ ತೊರೆದ ಮಾಜಿ ಸಚಿವ ಎ.ಮಂಜು ಅವರು ಜೆಡಿಎಸ್ ಸೇರಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹಾಸನ: ವಿಧಾನಪರಿಷತ್ ಚುನಾಚಣೆಯ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಎ.ಮಂಜು (A.Manju) ಬಿಜೆಪಿ ತೊರೆದು ಇಂದು (ಮಾರ್ಚ್ 11) ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ (HD Deve Gowda), ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕ ಹೆಚ್.ಡಿ.ರೇವಣ್ಣ ಅವರ ಸಮ್ಮುಖದಲ್ಲಿ ರಾಮನಗರದ ಬಿಡದಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಳಿಕ ಸಂಕಲ್ಪ ಹೋಮದ ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾದರು. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಂಜು, ಅರಕಲಗೂಡು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅಚ್ಚರಿಯೆಂಬಂತೆ ಇಂದು ಅವರು ಜೆಡಿಎಸ್ ಸೇರಿ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಮೂರು ದಶಕಕ್ಕೂ ಹೆಚ್ಚು ಕಾಲ ದೇವೇಗೌಡರ ಕುಟುಂಬದ ವಿರುದ್ಧವೇ ರಾಜಕಾರಣ ಮಾಡಿದ್ದರು. ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬದ್ದ ವೈರಿಗಳ ಜೊತೆಯೇ ಸೇರಿದರು. ಕಳೆದೊಂದು ವರ್ಷದಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಶಾಸಕ ಎ.ಟಿ.ರಾಮಸ್ವಾಮಿಗೆ ಸೆಡ್ಡು ಹೊಡೆಯಲು ಜೆಡಿಎಸ್ ನಾತಯಕರು ಮಂಜುಗೆ ಗಾಳ ಹಾಕಿದಂತಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ