AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EVM ಬದಲಿಗೆ ಬ್ಯಾಲೆಟ್ ಪೇಪರ್: ಸರ್ಕಾರದ ನಡೆ ಬಗ್ಗೆ ರಾಜ್ಯ ಚುನಾವಣಾ ಆಯುಕ್ತರು ಹೇಳಿದ್ದೇನು?

EVM ಬದಲಿಗೆ ಬ್ಯಾಲೆಟ್ ಪೇಪರ್: ಸರ್ಕಾರದ ನಡೆ ಬಗ್ಗೆ ರಾಜ್ಯ ಚುನಾವಣಾ ಆಯುಕ್ತರು ಹೇಳಿದ್ದೇನು?

ರಮೇಶ್ ಬಿ. ಜವಳಗೇರಾ
|

Updated on: Sep 05, 2025 | 3:26 PM

Share

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲು ಮತಪತ್ರ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ(ಸೆಪ್ಟೆಂಬರ್ 04) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ನೇತೃತ್ವದ ಎನ್​ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ನೇತಾರನ ಸಮರಕ್ಕೆ ಬೆಂಬಲ ಸೂಚಿಸಿವ ರೀತಿಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇನ್ನು ರಾಜ್ಯ ಸಚಿವ ಸಂಪುಟ ಬ್ಯಾಲಟ್ ಪೇಪರ್​​ ಮೂಲಕ ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಆದ್ರೆ, ಇದನ್ನು ರಾಜ್ಯ ಚುನಾವಣಾ ಆಯೋಗ ಸ್ವತಂತ್ರವಾಗಿ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಳ್ಳಲು ಬರುತ್ತಾ? ನಿಯಮಗಳೇನು ಇವೆ? ಸರ್ಕಾರ ರೂಪಿಸುವ ಕಾನೂನು ಚುನಾವಣಾ ಆಯೋಗ ಪಾಲಿಸಲೇಬೇಕಾ? ಅಥವಾ ತಿರಸ್ಕೃತ ಮಾಡಬಹುದಾ? ಈ ಬಗ್ಗೆ ಸ್ವತಃ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 05):ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲು ಮತಪತ್ರ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ(ಸೆಪ್ಟೆಂಬರ್ 04) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ನೇತೃತ್ವದ ಎನ್​ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ನೇತಾರನ ಸಮರಕ್ಕೆ ಬೆಂಬಲ ಸೂಚಿಸಿವ ರೀತಿಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇನ್ನು ರಾಜ್ಯ ಸಚಿವ ಸಂಪುಟ ಬ್ಯಾಲಟ್ ಪೇಪರ್​​ ಮೂಲಕ ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಆದ್ರೆ, ಇದನ್ನು ರಾಜ್ಯ ಚುನಾವಣಾ ಆಯೋಗ ಸ್ವತಂತ್ರವಾಗಿ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಳ್ಳಲು ಬರುತ್ತಾ? ನಿಯಮಗಳೇನು ಇವೆ? ಸರ್ಕಾರ ರೂಪಿಸುವ ಕಾನೂನು ಚುನಾವಣಾ ಆಯೋಗ ಪಾಲಿಸಲೇಬೇಕಾ? ಅಥವಾ ತಿರಸ್ಕೃತ ಮಾಡಬಹುದಾ? ಈ ಬಗ್ಗೆ ಸ್ವತಃ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.