ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಎಲೆಕ್ಷನ್ ಬಗ್ಗೆ ಚುನಾವಣೆ ಆಯುಕ್ತ ಹೇಳಿದ್ದಿಷ್ಟು
ನೆನೆಗುದಿಗೆ ಬಿದ್ದಿರುವ ಕರ್ನಾಟಕ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ನಡೆಸಲು ಕಾಲ ಕೂಡಿಬಂದಿದೆ. ಕರ್ನಾಟಕ ಹೈಕೋರ್ಟ್ ಗೆ ವಿವರಣೆ ಸಲ್ಲಿಸಿರುವ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅತ್ಯಗತ್ಯವಾಗಿರುವ ಮೀಸಲಾತಿ ಪಟ್ಟಿಯನ್ನು ಮೇ ತಿಂಗಳೊಳಗೆ ರಾಜ್ಯ ಚುನಾವಣೆಗೆ ಆಯೋಗಕ್ಕೆ ಸಲ್ಲಿಸುವುದಾಗಿ ಹೇಳಿದೆ. ಇನ್ನು ಈ ಬಗ್ಗೆ ಮೈಸೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರು, ಮಾರ್ಚ್ 24): ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ನಡೆಸಲು ಕಾಲ ಕೂಡಿಬಂದಿದೆ. ಕರ್ನಾಟಕ ಹೈಕೋರ್ಟ್ ಗೆ ವಿವರಣೆ ಸಲ್ಲಿಸಿರುವ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅತ್ಯಗತ್ಯವಾಗಿರುವ ಮೀಸಲಾತಿ ಪಟ್ಟಿಯನ್ನು ಮೇ ತಿಂಗಳೊಳಗೆ ರಾಜ್ಯ ಚುನಾವಣೆಗೆ ಆಯೋಗಕ್ಕೆ ಸಲ್ಲಿಸುವುದಾಗಿ ಹೇಳಿದೆ. ಅದೇ ವೇಳೆ, ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟ ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ಆರಂಭಿಸುವುದಾಗಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಹೇಳಿದೆ. ಅಲ್ಲಿಗೆ ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದು ಪಕ್ಕಾ ಆಗಿದೆ. ಇನ್ನು ಈ ಬಗ್ಗೆ ಮೈಸೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಪ್ರತಿಕ್ರಿಯಿಸಿದ್ದು, ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಅನಿಸುವುದಿಲ್ಲ. ಸರ್ಕಾರಕ್ಕೆ ತನ್ನದ ಆದ ಜವಾಬ್ದಾರಿ ಇರುತ್ತದೆ. ಯಾವುದೇ ವರ್ಗಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಸರ್ಕಾರ ಬೇರೆ ಕೆಲಸಗಳಿರುತ್ತವೆ. ಇದೆಲ್ಲಾ ನೋಡಿಕೊಂಡು ಚುನಾವಣೆ ಮಾಡಬೇಕು. ಆದರೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವುದು ಅತ್ಯಂತ ಮಹತ್ವವಾದದ್ದು, ಇದರ ಮೂಲಕವೇ ನಾಯಕರು ಬೆಳೆಯುತ್ತಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಆದಷ್ಟು ಬೇಗ ನಡೆಯಬೇಕು ಎಂದಿದ್ದಾರೆ.