AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಮಕಾತಿ ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ!

ನೇಮಕಾತಿ ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ!

ವಿನಯ್​ ಕಾಶಪ್ಪನವರ್​
| Edited By: |

Updated on: Nov 03, 2026 | 9:00 PM

Share

ಮೊನ್ನೆ ಅಷ್ಟೇ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಹಾವೇರಿ ಅಭ್ಯರ್ಥಿ ಅಕ್ರಮ ಎಸಗಿರುವುದು ಕಂಡುಬಂದಿದ್ದು, ಇದನ್ನು ಕೆಇಎ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಪರೀಕ್ಷಾ ಅಕ್ರಮ ತಡೆಗೆ ಕೆಇಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರತಿ ಪರೀಕ್ಷಾ ಕೊಠಡಿಗೆ ಇನ್ಮುಂದೆ ಇಬ್ಬರು ಮೇಲ್ವಿಚಾರಕರು, ಒಬ್ಬರು ಮುಂಭಾಗ, ಮತ್ತೊಬ್ಬರು ಹಿಂಭಾಗದಲ್ಲಿ ನಿಂತು ನಿಗಾ, ಪರೀಕ್ಷಾ ಕೊಠಡಿಯಲ್ಲಿನ ಜಾಮರ್ ಕಾರ್ಯನಿರ್ವಹಣೆ ಮೇಲೂ ನಿಗಾ, ಪರೀಕ್ಷಾ ಕೇಂದ್ರದ ಹೊರಗೆ ಮಾತ್ರವಲ್ಲ, ಕೊಠಡಿಯೊಳಗೂ ಎರಡನೇ ಹಂತದ ತಪಾಸಣೆ, ಪರೀಕ್ಷೆ ಆರಂಭಕ್ಕೂ ಅರ್ಧ ಗಂಟೆ ಮುನ್ನವೇ ಅಭ್ಯರ್ಥಿಗಳು ಹಾಜರಿರಬೇಕು, ಕೊನೆ ಕ್ಷಣದಲ್ಲಿ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶವಿಲ್ಲ

ಬೆಂಗಳೂರು, (ನವೆಂಬರ್ 03): ಮೊನ್ನೆ ಅಷ್ಟೇ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಹಾವೇರಿ ಅಭ್ಯರ್ಥಿ ಅಕ್ರಮ ಎಸಗಿರುವುದು ಕಂಡುಬಂದಿದ್ದು, ಇದನ್ನು ಕೆಇಎ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಪರೀಕ್ಷಾ ಅಕ್ರಮ ತಡೆಗೆ ಕೆಇಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರತಿ ಪರೀಕ್ಷಾ ಕೊಠಡಿಗೆ ಇನ್ಮುಂದೆ ಇಬ್ಬರು ಮೇಲ್ವಿಚಾರಕರು, ಒಬ್ಬರು ಮುಂಭಾಗ, ಮತ್ತೊಬ್ಬರು ಹಿಂಭಾಗದಲ್ಲಿ ನಿಂತು ನಿಗಾ, ಪರೀಕ್ಷಾ ಕೊಠಡಿಯಲ್ಲಿನ ಜಾಮರ್ ಕಾರ್ಯನಿರ್ವಹಣೆ ಮೇಲೂ ನಿಗಾ, ಪರೀಕ್ಷಾ ಕೇಂದ್ರದ ಹೊರಗೆ ಮಾತ್ರವಲ್ಲ, ಕೊಠಡಿಯೊಳಗೂ ಎರಡನೇ ಹಂತದ ತಪಾಸಣೆ, ಪರೀಕ್ಷೆ ಆರಂಭಕ್ಕೂ ಅರ್ಧ ಗಂಟೆ ಮುನ್ನವೇ ಅಭ್ಯರ್ಥಿಗಳು ಹಾಜರಿರಬೇಕು, ಕೊನೆ ಕ್ಷಣದಲ್ಲಿ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶವಿಲ್ಲ, ಪ್ರತಿ ಪರೀಕ್ಷಾ ಕೇಂದ್ರದ ಸಿಸಿಟಿವಿ ಮೇಲೆ ನಿಗಾ ಇಡಲು ಪ್ರತ್ಯೇಕ ಮೇಲ್ವಿಚಾರಕ, ವೆಬ್‌ಕಾಸ್ಟಿಂಗ್ ಮೂಲಕವೂ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ, ಹೀಗೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More