AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರದ ಪರಿಣಾಮ: ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದ ಸಿಎಂ

ಭೀಕರ ಬರದ ಪರಿಣಾಮ: ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದ ಸಿಎಂ

ಪ್ರಶಾಂತ್​ ಬಿ.
| Edited By: |

Updated on: Sep 14, 2026 | 1:47 PM

Share

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿನ ಭೀಕರ ಬರಗಾಲ ಮತ್ತು ಅಂತರ್ಜಲ ಕುಸಿತದ ಬಗ್ಗೆ ಮಾಹಿತಿ ನೀಡಿದ್ದಾರೆ. ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡಬೇಕಿದ್ದರೆ ದುಬಾರಿ ಬೆಲೆಗೆ ವಿದ್ಯುತ್ ಖರೀದಿಸುವ ಅನಿವಾರ್ಯತೆ ಇದೆ ಎಂದ ಸಿಎಂ, ಪಕ್ಕದ ರಾಜ್ಯಗಳೊಂದಿಗೆ ಚರ್ಚಿಸಲು ಸಚಿವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದಲ್ಲಿ ಈ ವರ್ಷ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಭೀಕರ ಬರಗಾಲ ಎದುರಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಅವರು, ಅಂತರ್ಜಲ ಮಟ್ಟ ಕುಸಿದಿದ್ದು, ವಿದ್ಯುತ್ ಅಭಾವದ ಸನ್ನಿವೇಶವೂ ಕಾಣುತ್ತಿದೆ. ರಾತ್ರಿ ವೇಳೆ, ಅಂದರೆ ಪೀಕ್ ಟೈಮ್​ನಲ್ಲಿ ವಿದ್ಯುತ್ ಪೂರೈಕೆಗಾಗಿ ದುಬಾರಿ ಬೆಲೆಗೆ (ಪ್ರತಿ ಯೂನಿಟ್‌ಗೆ 11-13 ರೂಪಾಯಿ) ವಿದ್ಯುತ್ ಖರೀದಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ. ವಿದ್ಯುತ್ ಸಮಸ್ಯೆ ನಿವಾರಣೆಗೆ ಪಕ್ಕದ ರಾಜ್ಯಗಳೊಂದಿಗೆ ಚರ್ಚಿಸುವಂತೆ ಇಂಧನ ಸಚಿವರಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಹಲವರು ಆಸಕ್ತಿ ತೋರುತ್ತಿದ್ದು, ಅವರಿಗೆ ನೀರು, ವಿದ್ಯುತ್ ಮತ್ತು ಭೂಮಿಯ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸುವಂತೆ ಅವರು ಜನತೆಯನ್ನು ಕೋರಿದ್ದಾರೆ. ಅಲ್ಲದೆ, ಕರಾವಳಿ ಪ್ರದೇಶದಲ್ಲಿ ಮೊದಲ ಕ್ಯಾಬಿನೆಟ್ ಸಭೆ ನಡೆಸಿದ್ದು, ವಲಸೆ ತಡೆಯಲು ಮತ್ತು ಅಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಸರ್ಕಾರ ಬದ್ಧವಾಗಿದೆ ಎಂದರು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಸವಾಲುಗಳನ್ನು ಎದುರಿಸಲು ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us