Sugarcane Farmers Protest: 3,300 ರೂ ಬೆಂಬಲ ಬೆಲೆಗೆ ಒಪ್ಪದ ರೈತರ ಹೋರಾಟ

Updated on: Nov 09, 2025 | 3:09 PM

ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ಟನ್‌ಗೆ 3,500 ರೂ. ಬೆಂಬಲ ಬೆಲೆ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಸಂಗಪ್ಪ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ. ಇನ್ನೊಂದೆಡೆ, ಹಾಸನದ ಜನಜಾಗಬೋರನಹಳ್ಳಿ ಗ್ರಾಮದಲ್ಲಿ ಕಾಡಾನೆ ಭೀಮ ಭತ್ತದ ಬೆಳೆಯನ್ನು ನಾಶಪಡಿಸಿ, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬಾಗಲಕೋಟೆ, ನವೆಂಬರ್ 9: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ 3,300 ರೂ. ಬೆಂಬಲ ಬೆಲೆಗೆ ಒಪ್ಪದ ಕಬ್ಬು ಬೆಳೆಗಾರರು, ಒಂದು ಟನ್‌ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನಿಗದಿಪಡಿಸುವಂತೆ ಹಾಗೂ ಹಿಂದಿನ ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ  ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ಚರ್ಚಿಸಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಒಡೆತನದ ಬೀಳಗಿ ಶುಗರ್ಸ್, ನಿರಾಣಿ ಶುಗರ್ಸ್, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಸೇರಿದಂತೆ ಸುಮಾರು ಹದಿಮೂರು ಕಾರ್ಖಾನೆಗಳ ಮಾಲೀಕರು ಭಾಗವಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.