ತಮಿಳುನಾಡಿಗೆ ಮತ್ತೆ 9 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಕರವೇ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಿಡಬ್ಲ್ಯುಆರ್‌ಸಿ ಆದೇಶ ಖಂಡಿಸಿ ಮಂಡ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಬರ ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಮಂಡ್ಯ, ಆಗಸ್ಟ್ 25: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ, ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸ್ನಾನಘಟ್ಟದ ಬಳಿ ಪ್ರತಿಭಟನೆ ಆರಂಭವಾಗಿದೆ. ರಾಜ್ಯ ಸರ್ಕಾರವು ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿದೆ ಮತ್ತು ತಮಿಳುನಾಡಿಗೆ ನೀರನ್ನು ಹರಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈಗಾಗಲೇ ಕಟಾವು ಮಾಡಿದ ಬೆಳೆಗಳಿಗೆ ನೀರಿಲ್ಲದೆ ರೈತರು ನಷ್ಟ ಅನುಭವಿಸಿದ್ದಾರೆ. ಮುಂದಿನ ಬೆಳೆಗಳಿಗೂ ನೀರಿನ ಕೊರತೆ ಎದುರಾಗಿದೆ.
ಕಾವೇರಿ ಸಮಿತಿಗಳ ಆದೇಶಗಳು ಅವೈಜ್ಞಾನಿಕವಾಗಿದ್ದು, ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

