ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ಹೆದ್ದಾರಿ ತಡೆ, ಬಸ್‌ಗಳಿಗೆ ಮುತ್ತಿಗೆ; ರಾಜ್ಯಾದ್ಯಂತ ಹೋರಾಟ

Updated on: Oct 31, 2026 | 7:43 PM

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ರೈತರು ರಸ್ತೆಗಳಲ್ಲಿ ಟೆಂಟ್ ಹಾಕಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ ನಿಗದಿಪಡಿಸಬೇಕು ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 31: ಪ್ರತಿ ಟನ್ ಕಬ್ಬಿಗೆ 5 ಸಾವಿರದ 500 ರೂ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಪಟ್ಟು ಹಿಡಿದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ರೈತರು, ಹೆದ್ದಾರಿ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಬಂದ್ ನಡುವೆಯೂ ರೋಡಿಗಿಳಿದಿದ್ದ ಬಸ್‌ಗಳಿಗೆ ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದರು. ಬಸ್​ಗಳಿಗೆ ಅಡ್ಡ ಮಲಗಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೆದ್ದಾರಿಗಳನ್ನು ತಡೆದು, ರಸ್ತೆಗಳಲ್ಲಿ ಮಲಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More