ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್; ಎಫ್​ಡಿಎ , ಎಸ್​ಡಿಎ ಇಲಾಖೆಗಳಲ್ಲಿ 5,431 ಹುದ್ದೆಗಳ ಭರ್ತಿಗೆ ಅಧಿಸೂಚನೆ

Updated on: Oct 30, 2026 | 6:53 AM

ಕರ್ನಾಟಕ ರಾಜ್ಯ ಸರ್ಕಾರವು 33 ಇಲಾಖೆಗಳಲ್ಲಿ ಒಟ್ಟು 5,431 ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೆಇಎ ವತಿಯಿಂದ ನಡೆಸಲಾಗುವ ಈ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪರೀಕ್ಷೆಗಳನ್ನು ಜನವರಿ 8, 9, 10, 16 ಮತ್ತು 17 ರಂದು ನಡೆಸಲಾಗುವುದು.

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಒಟ್ಟು 33 ಇಲಾಖೆಗಳಲ್ಲಿ 5,431 ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ನಡೆಸುವ ಜವಾಬ್ದಾರಿ ಹೊತ್ತಿದೆ.

ಈ ಮಹತ್ವದ ನೇಮಕಾತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಅರ್ಜಿ ಸಲ್ಲಿಕೆಯು ಶೀಘ್ರದಲ್ಲೇ ಆರಂಭವಾಗಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 25 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿದೆ.

ಆಯ್ಕೆ ಪ್ರಕ್ರಿಯೆಯ ಭಾಗವಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜನವರಿ 8, 9, 10, 16 ಮತ್ತು 17 ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಇದು ರಾಜ್ಯದ ಯುವಜನರಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More