ಮೇ 28ಕ್ಕೆ ಫಿಲ್ಮ್​ ಚೇಂಬರ್​ ಚುನಾವಣೆ; ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಭಾ.ಮ. ಹರೀಶ್​

| Updated By: ಮದನ್​ ಕುಮಾರ್​

Updated on: May 12, 2022 | 12:57 PM

ಈ ಬಾರಿ ನಿರ್ಮಾಪಕರ ವಲಯದಿಂದ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಆಗಲಿದ್ದಾರೆ. ಮೇ 28ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಲಿದ್ದು, ಕುತೂಹಲ ಸೃಷ್ಟಿ ಆಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಗೆ ದಿನಗಣನೆ ಆರಂಭ ಆಗಿದೆ. ಮೇ 28ರಂದು ಫಿಲ್ಮ್​ ಚೇಂಬರ್​ ಎಲೆಕ್ಷನ್​ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ (Ba Ma Harish) ಅವರು ನಾಮಪತ್ರ ಸಲ್ಲಿಸಿದ್ದಾರೆ. ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೊನಾ ಕಾರಣದಿಂದ ಪದೇ ಪದೇ ಚುನಾವಣೆ (Film Chamber election) ಮುಂದೂಡಿಕೆ ಆಗುತ್ತಿತ್ತು. ಹಾಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದೆ. ಕನ್ನಡ ಸಿನಿಮಾಗಳ ಶೀರ್ಷಿಕೆ ನೋಂದಣಿ ಸೇರಿದಂತೆ ಅನೇಕ ಕಾರ್ಯಗಳನ್ನು ಫಿಲ್ಮ್​ ಚೇಂಬರ್​ ಮಾಡುತ್ತದೆ. ಸಿನಿಮಾ ತಂಡಗಳ ನಡುವೆ ತಕರಾರುಗಳಿದ್ದರೆ ಮಂಡಳಿಯಲ್ಲೇ ಮಾತುಕತೆ ಮೂಲಕ ಬಗೆಹರಿಸಿಕೊಂಡ ಹಲವು ನಿದರ್ಶನಗಳಿವೆ. ಈ ಎಲ್ಲ ಕಾರಣಗಳಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಾಮುಖ್ಯತೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: May 12, 2022 12:57 PM