ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!

Updated on: Mar 24, 2025 | 8:45 PM

ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆ ಕಾಲ ಕೂಡಿಬಂದಂತಿದೆ. ಈ ವರ್ಷದಲ್ಲೇ ಕರ್ನಾಟಕದ ಐದು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಈ ವವರ್ಷವೇ ಚುನಾವಣೆ ಮಾಡುತ್ತೇವೆ ಎಂದರು.

ಮೈಸೂರು, (ಮಾರ್ಚ್ 24): ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆ ಕಾಲ ಕೂಡಿಬಂದಂತಿದೆ. ಈ ವರ್ಷದಲ್ಲೇ ಕರ್ನಾಟಕದ ಐದು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಈ ವವರ್ಷವೇ ಚುನಾವಣೆ ಮಾಡುತ್ತೇವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾ ನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ. ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾ ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆದಿದೆ ಎಂದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More