ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್, ಸಚಿವ ಮುನಿಯಪ್ಪ ಹೇಳಿದ್ದಿಷ್ಟು

Updated on: Apr 09, 2026 | 3:40 PM

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಬಿಪಿಎಲ್ ಕಾರ್ಡ್​​ಗೆ ಈಗಾಗಲೇ ಅರ್ಜಿ ಹಾಕಿದವರಿಗೆ ಆಹಾರ ಇಲಾಖೆ ಸಚಿವ ಕೆಚ್​​​ಎಚ್ ಮುನಿಯಪ್ಪ ಗುಡ್​ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಈ ಬಗ್ಗೆ ಈಗಾಗಲೇ ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ.ಒಂದು ವೇಳೆ ಕಾರ್ಡ್ ರದ್ದಾಗಿದ್ರೆ ತಹಶೀಲ್ದಾರರಿಗೆ ಅರ್ಜಿ ಹಾಕಬೇಕು. 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೋಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 09): ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಬಿಪಿಎಲ್ ಕಾರ್ಡ್​​ಗೆ (BPL Card) ಈಗಾಗಲೇ ಅರ್ಜಿ ಹಾಕಿದವರಿಗೆ ಆಹಾರ ಇಲಾಖೆ ಸಚಿವ ಕೆಚ್​​​ಎಚ್ ಮುನಿಯಪ್ಪ (Minister KH Muniyappa )ಗುಡ್​ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಈ ಬಗ್ಗೆ ಈಗಾಗಲೇ ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ.ಒಂದು ವೇಳೆ ಕಾರ್ಡ್ ರದ್ದಾಗಿದ್ರೆ ತಹಶೀಲ್ದಾರರಿಗೆ ಅರ್ಜಿ ಹಾಕಬೇಕು. 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೋಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಎಪಿಎಲ್ ಕಾರ್ಡ್ ಗೆ ನಾವು ಏನು ಮಾಡುತ್ತಿಲ್ಲ. ಎಪಿಎಲ್ ಗೆ ಸಾಕಷ್ಟು ಜನರು ಅರ್ಜಿ ಹಾಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಹೇಳಿದಂತೆ ಪರಿಷ್ಕರಣೆ ಮಾಡುತ್ತಿದ್ದೇವೆ. ಬಿಪಿಎಲ್ ಅರ್ಹರರಲ್ಲದವರು ಎಪಿಎಲ್ ಪಡೆಯಲಿ. ಏಳು ಲಕ್ಷ ಕಾರ್ಡುಗಳು ಅರ್ಹತೆ ಮಿರಿ ಎಪಿಎಲ್ ನವರು ಇದ್ದಾರೆ. ಸುಮಾರು 14 ಲಕ್ಷ ಕಾರ್ಡುಗಳು ಎಪಿಎಲ್ ನವರು ಬಿಪಿಎಲ್ ನಲ್ಲಿ ಇದ್ದಾರೆ. ನಿಧಾನವಾಗಿ ಬಿಪಿಎಲ್ ಗೆ ತೊಂದರೆಯಾಗದಂತೆ ಪರಿಷ್ಕರಣೆ ಮಾಡಬೇಕಿದ್ದು, ಹಂತ ಹಂತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More