AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR ವೇಳೆ ಫಾರ್ಮ್-7 ದುರ್ಬಳಕೆ ಜಟಾಪಟಿ: ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು

SIR ವೇಳೆ ಫಾರ್ಮ್-7 ದುರ್ಬಳಕೆ ಜಟಾಪಟಿ: ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು

ಕಿರಣ್​ ಹನಿಯಡ್ಕ
| Edited By: |

Updated on: Oct 06, 2026 | 12:53 PM

Share

ಕರ್ನಾಟಕದಲ್ಲಿ ಎಸ್‌ಐಆರ್ ಫಾರ್ಮ್-7 ದುರ್ಬಳಕೆ ವಿವಾದ ರಾಜಕೀಯ ತಿರುವು ಪಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ತಮ್ಮ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ದೂರು ನೀಡಿದ್ದಾರೆ. ಬಿಜೆಪಿ ಮೇಲೆ ಮತದಾರರ ಹೆಸರನ್ನು ಡಿಲೀಟ್ ಮಾಡುವ ಷಡ್ಯಂತ್ರದ ಆರೋಪವನ್ನು ಕಾಂಗ್ರೆಸ್ ಮಾಡಿದ್ದರೆ, ಚುನಾವಣಾ ಆಯೋಗವು ಫಾರ್ಮ್-7 ಬಳಕೆಯನ್ನು ಕಾನೂನುಬದ್ಧ ಹಕ್ಕು ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು, ಅಕ್ಟೋಬರ್​​ 06: SIR ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ FIR ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಟಿ.ಸಿ.ಗೆಹ್ಲೋಟ್​ಗೆ ಬಿಜೆಪಿ-ಜೆಡಿಎಸ್​​​ ನಾಯಕರು ದೂರು ನೀಡಿದ್ದಾರೆ. ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್​ ಭೇಟಿಯಾಗಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಪರಿಷತ್ ಜೆಡಿಎಸ್ ನಾಯಕ S.L. ಭೋಜೇಗೌಡ ನಿಯೋಗ ದೂರು ಸಲ್ಲಿಕೆ ಮಾಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More