SIR ವೇಳೆ ಫಾರ್ಮ್-7 ದುರ್ಬಳಕೆ ಜಟಾಪಟಿ: ರಾಜ್ಯ ಸರ್ಕಾರದ ವಿರುದ್ಧ ಗವರ್ನರ್ಗೆ ಬಿಜೆಪಿ-ಜೆಡಿಎಸ್ ನಿಯೋಗದಿಂದ ದೂರು
ಕರ್ನಾಟಕದಲ್ಲಿ ಎಸ್‌ಐಆರ್ ಫಾರ್ಮ್-7 ದುರ್ಬಳಕೆ ವಿವಾದ ರಾಜಕೀಯ ತಿರುವು ಪಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ತಮ್ಮ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ದೂರು ನೀಡಿದ್ದಾರೆ. ಬಿಜೆಪಿ ಮೇಲೆ ಮತದಾರರ ಹೆಸರನ್ನು ಡಿಲೀಟ್ ಮಾಡುವ ಷಡ್ಯಂತ್ರದ ಆರೋಪವನ್ನು ಕಾಂಗ್ರೆಸ್ ಮಾಡಿದ್ದರೆ, ಚುನಾವಣಾ ಆಯೋಗವು ಫಾರ್ಮ್-7 ಬಳಕೆಯನ್ನು ಕಾನೂನುಬದ್ಧ ಹಕ್ಕು ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರು, ಅಕ್ಟೋಬರ್ 06: SIR ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ FIR ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಟಿ.ಸಿ.ಗೆಹ್ಲೋಟ್‌ಗೆ ಬಿಜೆಪಿ-ಜೆಡಿಎಸ್ ನಾಯಕರು ದೂರು ನೀಡಿದ್ದಾರೆ. ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್ ಭೇಟಿಯಾಗಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಪರಿಷತ್ ಜೆಡಿಎಸ್ ನಾಯಕ S.L. ಭೋಜೇಗೌಡ ನಿಯೋಗ ದೂರು ಸಲ್ಲಿಕೆ ಮಾಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
