AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ: ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ: ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ

ಪ್ರಸನ್ನ ಗಾಂವ್ಕರ್​
| Edited By: |

Updated on:Oct 11, 2026 | 9:22 PM

Share

ಕೆಲವು ಸಚಿವರನ್ನು ಟ್ರ್ಯಾಪ್​ ಮಾಡಲು ಖಾಸಗಿ ಟೀಮ್ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಸಂಚಲನ ಸೃಷ್ಟಿ ಮಾಡಿದೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧವೂ ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಟಿಂಗ್ ಆಪರೇಷನ್​​ನಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಸಿದ್ದರಾಮಯ್ಯ ಸಹ ಮೌನ ಮುರಿದಿದ್ದು, ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 11): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ಕೋಲಾಹಲ ಸೃಷ್ಟಿಸಿದೆ. ಮಾರುವೇಷದ ಕಾರ್ಯಾಚರಣೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ವೇದಿಕೆಯಾಗಿದೆ. ನನ್ನನ್ನೂ ಸೇರಿ ಕೆಲವು ಸಚಿವರನ್ನು ಟ್ರ್ಯಾಪ್​ ಮಾಡಲು ಖಾಸಗಿ ಟೀಮ್ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಸಂಚಲನ ಸೃಷ್ಟಿ ಮಾಡಿದೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧವೂ ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಟಿಂಗ್ ಆಪರೇಷನ್​​ನಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಸಿದ್ದರಾಮಯ್ಯ ಸಹ ಮೌನ ಮುರಿದಿದ್ದು, ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸ್ಟಿಂಗ್ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಯಾರು ಮಾಡ್ತಿದ್ದಾರೆ ಅನ್ನೋ ಸತ್ಯ ಗೊತ್ತಾಗಬೇಕಲ್ಲ ಎಂದಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ಹೇಳಿಕೆ ಕುತೂಹಲ ಮೂಡಿಸಿದ್ದು, ಪರೋಕ್ಷವಾಗಿ ಸ್ಟಿಂಗ್ ಆಪರೇಷನ್​​ ಬಗ್ಗೆ ತನಿಖೆಯಲ್ಲಿ ಹೊರಬರಬೇಕು ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 11, 2026 09:20 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More