ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಮೈಸೂರಿನ ಈ ಭವ್ಯ ಬಂಗಲೆ ಹೇಗಿದೆ ನೋಡಿ

Edited By:

Updated on: Sep 14, 2026 | 11:40 AM

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ತಮ್ಮ ನೂತನ ನಿವಾಸಕ್ಕೆ ಸರಳವಾಗಿ ಗೃಹಪ್ರವೇಶ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 14 ಗಣೇಶ) ಚತುರ್ಥಿಯಂದು ಯಾವುದೇ ರಾಜಕೀಯ ಗಣ್ಯರಿಲ್ಲದೆ ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತ ಪೂಜೆ ನೆರವೇರಿಸಿ ಗೃಹಪ್ರವೇಶ ಮಾಡಿದ್ದಾರೆ. ಯಾವುದೇ ಅದ್ದೂರಿತನವಿಲ್ಲದೆ, ರಾಜಕೀಯ ನಾಯಕರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನೀಡದೆ ಅತ್ಯಂತ ಸರಳ ಮತ್ತು ಖಾಸಗಿಯಾಗಿ ಈ ಪೂಜಾ ಕೈಂಕರ್ಯಗಳು ನೆರವೇರಿವೆ. ಇದರೊಂದಿಗೆ ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಯವರ ಅವರ ಬಹುಕಾಲದ ಸ್ವಂತ ಮನೆಯ ಕನಸು ಕೊನೆಗೂ ನನಸಾಗಿದೆ. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಬಳಿ ನಿರ್ಮಿಸಲಾಗಿರುವ ಈ ನೂತನ ಭವ್ಯ ನಿವಾಸ ಹೇಗಿದೆ ಎನ್ನುವುದನ್ನು ನೀವು ನೋಡಿ.

ಮೈಸೂರು, (ಸೆಪ್ಟೆಂಬರ್ 14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ತಮ್ಮ ನೂತನ ನಿವಾಸಕ್ಕೆ ಸರಳವಾಗಿ ಗೃಹಪ್ರವೇಶ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 14 ಗಣೇಶ) ಚತುರ್ಥಿಯಂದು ಯಾವುದೇ ರಾಜಕೀಯ ಗಣ್ಯರಿಲ್ಲದೆ ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತ ಪೂಜೆ ನೆರವೇರಿಸಿ ಗೃಹಪ್ರವೇಶ ಮಾಡಿದ್ದಾರೆ. ಯಾವುದೇ ಅದ್ದೂರಿತನವಿಲ್ಲದೆ, ರಾಜಕೀಯ ನಾಯಕರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನೀಡದೆ ಅತ್ಯಂತ ಸರಳ ಮತ್ತು ಖಾಸಗಿಯಾಗಿ ಈ ಪೂಜಾ ಕೈಂಕರ್ಯಗಳು ನೆರವೇರಿವೆ. ಇದರೊಂದಿಗೆ ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಯವರ ಅವರ ಬಹುಕಾಲದ ಸ್ವಂತ ಮನೆಯ ಕನಸು ಕೊನೆಗೂ ನನಸಾಗಿದೆ. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಬಳಿ ನಿರ್ಮಿಸಲಾಗಿರುವ ಈ ನೂತನ ಭವ್ಯ ನಿವಾಸ ಹೇಗಿದೆ ಎನ್ನುವುದನ್ನು ನೀವು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More