AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ ಎಫ್​ಎಸ್​ಎಸ್​ಎಐ ದಾಳಿ, ನಿಯಮ ಉಲ್ಲಂಘಿಸಿದ್ರೆ ಪರವಾನಗಿ ರದ್ದು

ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ ಎಫ್​ಎಸ್​ಎಸ್​ಎಐ ದಾಳಿ, ನಿಯಮ ಉಲ್ಲಂಘಿಸಿದ್ರೆ ಪರವಾನಗಿ ರದ್ದು

ವಿನಯ್​ ಕಾಶಪ್ಪನವರ್​
| Edited By: |

Updated on: Oct 15, 2026 | 2:18 PM

Share

ದಸರಾ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿಹಿ ತಿಂಡಿಗಳ ಗುಣಮಟ್ಟ ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಸಚಿವ ಯು.ಟಿ. ಖಾದರ್ ಸೂಚನೆಯಂತೆ ಸ್ವೀಟ್ಸ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ, ಅವಧಿ ಮೀರಿದ ಅಥವಾ ಕಳಪೆ ಗುಣಮಟ್ಟದ ಆಹಾರ ಪತ್ತೆಯಾದರೆ ತಕ್ಷಣವೇ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಅಕ್ಟೋಬರ್ 15: ದಸರಾ ಹಬ್ಬದ ಸಂಭ್ರಮ ಒಂದೆಡೆಯಾದರೆ ಅದರ ಬೆನ್ನಲ್ಲೇ ದೀಪಾವಳಿ ಹಬ್ಬದ ಸಡಗರವೂ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸಿಹಿ ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ವಿಶೇಷ ದಾಳಿ ನಡೆಸುತ್ತಿದೆ. ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ಆರಂಭಗೊಂಡಿದ್ದು, ದೀಪಾವಳಿ ಹಬ್ಬದವರೆಗೂ ಈ ನಿಗಾ ಮುಂದುವರಿಯಲಿದೆ. ಎಫ್​ಎಸ್​ಎಸ್​ಎಐ ಅಧಿಕಾರಿಗಳು ಏಕಕಾಲಕ್ಕೆ ರಾಜ್ಯದಾದ್ಯಂತ ದಾಳಿ ನಡೆಸಿ, ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರ ಪದಾರ್ಥಗಳ ಅವಧಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾವುದೇ ತಯಾರಿಕಾ ಘಟಕದಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, ಕಳಪೆ ಗುಣಮಟ್ಟದ ಉತ್ಪನ್ನಗಳು ಅಥವಾ ಸ್ವಚ್ಛತೆಯ ಕೊರತೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮ ಉಲ್ಲಂಘನೆ ಮಾಡುವ ಘಟಕಗಳ ಪರವಾನಗಿಯನ್ನು ಸ್ಥಳದಲ್ಲೇ ರದ್ದುಗೊಳಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಕಲಬೆರಕೆ ಮತ್ತು ಕಳಪೆ ಆಹಾರ ತಯಾರಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಈ ಕ್ರಮವು ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಸುರಕ್ಷಿತ ಸಿಹಿ ತಿಂಡಿಗಳು ಲಭ್ಯವಾಗುವುದನ್ನು ಖಚಿತಪಡಿಸುವ ಗುರಿಯನ್ನು ಹೊಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More