Ganesh Chaturthi 2025: ರಾಜ್ಯಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ, ನೇರಪ್ರಸಾರ
ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿಯಂದು ಆಚರಿಸುವ ಗಣೇಶ ಚತುರ್ಥಿ ಹಬ್ಬವನ್ನು ಈ ವರ್ಷ ಹುಬ್ಬಳ್ಳಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯನ್ನು ಪೂಜಿಸುವುದು ಈ ಹಬ್ಬದ ಪ್ರಮುಖ ಅಂಶ. ಇಂದು ಮಧ್ಯಾಹ್ನ 12 ಗಂಟೆಗೆ ರಾಣಿ ಚನ್ನಮ್ಮ (ಈದ್ಗಾ) ಮೈದಾನದಲ್ಲಿ ಕೃಷ್ಣಾವತಾರಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ. ನಗರದಾದ್ಯಂತ ವಿವಿಧ ಕಡೆ ಗಣೇಶ ಚತುರ್ಥಿ ಆಚರಣೆಗಳು ನಡೆಯುತ್ತಿವೆ.
ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ನಾಡಿನಾದ್ಯಂತ ಗಣೇಶ ಚತುರ್ಥಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ (ಈದ್ಗಾ) ಮೈದಾನದಲ್ಲಿ ಇಂದು ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಮಧ್ಯಾಹ್ನ 12 ಕ್ಕೆ ಕೃಷ್ಣಾವತಾರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.
