AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ

ನಿರುದ್ಯೋಗಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ

ಅಕ್ಷಯ್​ ಪಲ್ಲಮಜಲು​​
|

Updated on:Jul 16, 2026 | 2:22 PM

Share

ರಾಜ್ಯದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇದರಲ್ಲಿ ಕ್ರೀಡಾಪಟುಗಳಿಗೆ 2% (ಪೊಲೀಸ್ ಇಲಾಖೆಯಲ್ಲಿ 3%) ಮೀಸಲಾತಿ ಅಡಿಯಲ್ಲಿ ಸುಮಾರು 2,000 ಹುದ್ದೆಗಳು ಲಭ್ಯವಿವೆ. ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ಹಾಗೂ 50 ಕೋಚ್‌ಗಳ ನೇಮಕಾತಿಯನ್ನು ಮಂತ್ರಿ ಪರಮೇಶ್ವರ್ ಘೋಷಿಸಿದ್ದಾರೆ.

ಬೆಂಗಳೂರು, ಜು.16: ಕರ್ನಾಟಕದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಹಣಕಾಸು ಇಲಾಖೆಯ ಅನುಮೋದನೆಯೊಂದಿಗೆ ವಿವಿಧ ಇಲಾಖೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲು ತಿಳಿಸಲಾಗಿದೆ. ಈ ಬೃಹತ್ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾಮಾನ್ಯ ಇಲಾಖೆಗಳಲ್ಲಿ 2% ಮತ್ತು ಪೊಲೀಸ್ ಇಲಾಖೆಯಲ್ಲಿ 3% ಹುದ್ದೆಗಳನ್ನು ಮೀಸಲಿಡಲಾಗಿದೆ. ಇದರಿಂದ ಸುಮಾರು 2,000 ಹುದ್ದೆಗಳು ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ದೊರೆಯಲಿವೆ. ಕಳೆದ ಬಾರಿ ಗೃಹ ಸಚಿವರಾಗಿದ್ದಾಗ 180 ಪೊಲೀಸ್ ಸಿಬ್ಬಂದಿ ಮತ್ತು 40 ಸಬ್ ಇನ್ಸ್‌ಪೆಕ್ಟರ್‌ಗಳು ಕ್ರೀಡಾ ಕೋಟಾದಡಿಯಲ್ಲಿ ಆಯ್ಕೆಯಾಗಿದ್ದರು ಎಂದು ತಿಳಿಸಿದರು. ರಾಜ್ಯ ಸರ್ಕಾರ ಹೊಸ ಪ್ರೋತ್ಸಾಹಧನ ಯೋಜನೆಯನ್ನೂ ಪರಿಚಯಿಸಿದೆ. ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೂ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಚಿನ್ನದ ಪದಕ ವಿಜೇತರಿಗೆ 35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ, ಕಂಚಿನ ಪದಕ ವಿಜೇತರಿಗೆ 15 ಲಕ್ಷ ರೂಪಾಯಿ ಬಹುಮಾನ ನೀಡುವುದನ್ನು ಮುಂದುವರಿಸಲಾಗುವುದು. ಇದರ ಜೊತೆಗೆ, ರಾಜ್ಯದಲ್ಲಿ ಕ್ರೀಡಾ ಪ್ರತಿಭೆಗಳನ್ನು ಬೆಳೆಸಲು 50 ಕೋಚ್‌ಗಳನ್ನು ನೇಮಕ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಕ್ರಮಗಳು ರಾಜ್ಯದಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲ ನೀಡುವ ಸರ್ಕಾರದ ಬದ್ಧತೆವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 16, 2026 02:21 PM

Follow Us