ಎರಡನೇ ಬೆಳೆಗೆ ತುಂಗಭದ್ರಾ ನೀರು ಹರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೀಗ್ಯಾಕಂದ್ರು?

Updated on: Nov 09, 2025 | 9:18 PM

ರಾಯಚೂರು, ಕೊಪ್ಪಳ, ಬಳ್ಳಾರಿಯಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಸೇರಿಕೊಂಡು ಎರಡನೇ ಬೆಳೆಗೆ ನೀರು ಹರಿಸಲೇಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಈ ಬಗ್ಗೆ ಬಳ್ಳಾರಿಯಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್, ತುಂಗಾಭದ್ರ ಅಣೆಕಟ್ಟು ಮುಖ್ಯವೋ? ಬೆಳೆ ಮುಖ್ಯವೋ? ಇದರ ಬಗ್ಗೆ ಆಲೋಚಿಸಬೇಕು ಎಂದು ರೈತರ ತೀರ್ಮಾನಕ್ಕೆ ಬಿಟ್ಟಿದ್ದಾರೆ.

ಬಳ್ಳಾರಿ, (ನವೆಂಬರ್ 09): ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ತುಂಗಭದ್ರಾ ಜಲಾಶಯದ ಎಲ್ಲಾ ಗೇಟುಗಳನ್ನು ಬದಲಾವಣೆ ಮಾಡಬೇಕಿದೆ. ಈಗಾಗಲೇ ಟೆಂಡರ್ ಮುಗಿದಿದ್ದು, ಕೆಲಸ ಕಾರ್ಯಾರಂಭವಾಗಬೇಕಿದೆ. ಹೀಗಾಗಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಎರಡನೇ ಬೆಳೆಗೆ ನೀರಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಆದ್ರೆ, ರಾಯಚೂರು, ಕೊಪ್ಪಳ, ಬಳ್ಳಾರಿಯಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಸೇರಿಕೊಂಡು ಎರಡನೇ ಬೆಳೆಗೆ ನೀರು ಹರಿಸಲೇಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಈ ಬಗ್ಗೆ ಬಳ್ಳಾರಿಯಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್, ತುಂಗಾಭದ್ರ ಅಣೆಕಟ್ಟು ಮುಖ್ಯವೋ? ಬೆಳೆ ಮುಖ್ಯವೋ? ಇದರ ಬಗ್ಗೆ ಆಲೋಚಿಸಬೇಕು ಎಂದು ರೈತರ ತೀರ್ಮಾನಕ್ಕೆ ಬಿಟ್ಟಿದ್ದಾರೆ.

“ತುಂಗಭದ್ರಾ ಡ್ಯಾಂನ ಎಲ್ಲಾ ಕ್ರೆಸ್ಟ್ ಗೇಟ್ ಗಳನ್ನ ಬದಲಾವಣೆ ಮಾಡಲಾಗುತ್ತಿದೆ‌. ಈಗಾಗಲೇ ಕೆಲಸವೂ ನಡೆಯುತ್ತಿದೆ. ಎರಡನೇ ಬೆಳೆ ವಿಚಾರವಾಗಿ ಕೆಲವರು ರಾಜಕಾರಣ ಮಾಡುತ್ತಿದ್ದಾರೆ. ನಾವೇನೂ ರೈತರಿಗೆ ನೀರು ಕೊಡಬಾರದು ಎನ್ನುವ ಧೋರಣೆ ಹೊಂದಿಲ್ಲ. ಆದರೆ ಅಣೆಕಟ್ಟು ಮುಖ್ಯವೋ? ಬೆಳೆ ಮುಖ್ಯವೋ ಎಂಬುದನ್ನು ರೈತರು ಆಲೋಚಿಸಬೇಕು.ಯಾರ ಒತ್ತಡಕ್ಕೂ ರೈತರು ಮಣಿಯಬಾರದು. ಕೇಂದ್ರ ಸರ್ಕಾರ ರಚನೆ ಮಾಡಿರುವ ತುಂಗಭದ್ರಾ ಸಮಿತಿಯು ನೀರು ನೀಡುವ ಬಗ್ಗೆ ತೀರ್ಮಾನ ಮಾಡುತ್ತದೆ” ಎಂದು ಹೇಳಿದರು.