ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದ್ಯಾ? ಅನುಮಾನ ಮೂಡಿಸಿದ ಅಧಿಕಾರಿಗಳ ಅಂಕಿ-ಅಂಶ

| Updated By: ರಮೇಶ್ ಬಿ. ಜವಳಗೇರಾ

Updated on: Sep 20, 2023 | 10:17 AM

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಬಿಡಲಾಗುತ್ತಿದೆಯಾ? ಹೌದು...ತಮಿಳುನಾಡಿಗೆ ನೀರು ಬಿಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೂ ಸಹ ಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ಕದ್ದು ಮುಚ್ಚಿ ಹರಿಸಲಾಗುತ್ತಿದೆ.

ಮಂಡ್ಯ,(ಸೆ.20): ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಬಿಡಲಾಗುತ್ತಿದೆಯಾ? ಹೌದು…ತಮಿಳುನಾಡಿಗೆ ನೀರು ಬಿಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೂ ಸಹ ಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ಕದ್ದು ಮುಚ್ಚಿ ಹರಿಸಲಾಗುತ್ತಿದೆ. ನದಿ ಮೂಲಕ ಎರಡು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಬಿಡಲಾಗಿದೆ. ತಮಿಳುನಾಡಿಗೆ ನೀರು ಬಿಟ್ಟಿಲ್ಲ ಅಂದ್ರು ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ, ಜಲಾಶಯದ ಸೀಪೇಜ್ ನೀರು ಎಂದು ಸಮರ್ಥಿಸಿಕೊಂಡಿದ್ದಾರೆ. ನೀರು ಬಿಡುತ್ತಿಲ್ಲವೆಂದು ಹೇಳಿ ಕದ್ದುಮುಚ್ಚಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಮಾಡುತ್ತಿದ್ಯಾ ಸರ್ಕಾರ? ಅಧಿಕಾರಿಗಳು‌ ಕೊಟ್ಟಿರುವ ಅಂಕಿ ಅಂಶ ಹಲವು ಅನುಮಾನಕ್ಕೆ ಕಾರಣವಾಗಿದೆ.

ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us on