ರಾಜ್ಯ ನೌಕರರಿಗೆ ಎಷ್ಟು ಸಿಗಲಿದೆ ವೇತನ? 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬಗ್ಗೆ ಅಧ್ಯಕ್ಷ ಬಿಚ್ಚಿಟ್ಟ ಮಾಹಿತಿ
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ಬೆಂಗಳೂರು, (ಜುಲೈ 15): ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ (Karnataka Government) ತೀರ್ಮಾನ ಮಾಡಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ (Karnataka Government Employees) ಜಾಸ್ತಿಯಾಗಲಿದೆ. ಇನ್ನು 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಂಯ್ಯ, ಡಿಕೆ ಶಿವಕುಮಾರ್ ಹಾಗೂ ಹಣಕಾಸು ಇಲಾಖೆಗೆ ಕೃತಜ್ಞತೆ ಹೇಳಿದ್ದಾರೆ. ಇನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಕೆಲವೊಂದಿಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ