ಗೃಹಜ್ಯೋತಿ, ಗೃಹಲಕ್ಷ್ಮೀ ಮೆಗಾ ಸ್ಕೀಮ್​: ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ ಮಾಡ್ತಿದ್ದಾರೆ!

ಬೆಂಗಳೂರು ಮೂಲದ ನಬೀರ್ ಹುಸೇನ್ ಎಂಬಾತ ಬಳ್ಳಾರಿಯ ಅಹಂಭಾವಿಯಲ್ಲಿ ಮನೆ ಮನೆಗೆ ಹೋಗಿ ಆನಲೈನ್​ನಲ್ಲಿ ಅರ್ಜಿ ಅಪಲೋಡ್ ಮಾಡುವ ಭರವಸೆ ನೀಡಿ ಮಹಿಳೆಯರಿಂದ 150 ರೂಪಾಯಿಂದ 200 ರೂಪಾಯಿ ವರೆಗೆ ಹಣ ವಸೂಲಿ ಮಾಡುತ್ತಿದ್ದ.

ಗೃಹಜ್ಯೋತಿ, ಗೃಹಲಕ್ಷ್ಮೀ ಮೆಗಾ ಸ್ಕೀಮ್​: ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ ಮಾಡ್ತಿದ್ದಾರೆ!
| Updated By: ಸಾಧು ಶ್ರೀನಾಥ್​

Updated on: Jun 29, 2023 | 1:57 PM

ಬಳ್ಳಾರಿ: ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಗೃಹಜ್ಯೋತಿ (Gruha Jyothi Scheme) ಮತ್ತು ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಹೆಸರಿನಲ್ಲಿ ಜನರಿಗೆ ವಂಚನೆ ಎಸಗಲು ವಂಚಕರು ಅಖಾಡಕ್ಕಿಳಿದಿದ್ದಾರೆ. ಗ್ಯಾರಂಟಿ ಯೋಜನೆಗಳ ಲಾಭ ಕೊಡಿಸುವ ಹೆಸರಿನಲ್ಲಿ ಜನರ ಬಳಿ ಬಂದು ಅರ್ಜಿ ಸಲ್ಲಿಕೆ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್ ತಜ್ಞನೊಬ್ಬನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೆ ಒಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ನಬೀರ್ ಹುಸೇನ್ ಎಂಬಾತ ಬಳ್ಳಾರಿಯ ಅಹಂಭಾವಿಯಲ್ಲಿ ಮನೆ ಮನೆಗೆ ಹೋಗಿ ಆನಲೈನ್​ನಲ್ಲಿ ಅರ್ಜಿ ಅಪಲೋಡ್ ಮಾಡುವ ಭರವಸೆ ನೀಡಿ ಮಹಿಳೆಯರಿಂದ 150 ರೂಪಾಯಿಂದ 200 ರೂಪಾಯಿ ವರೆಗೆ ಹಣ ವಸೂಲಿ ಮಾಡುತ್ತಿದ್ದ. ಅಲ್ಲದೆ, ದಿಶಾ ಒನ್ ಹೆಸರಿನಲ್ಲಿ ಬಿಲ್ ನೀಡುತ್ತಿದ್ದನು. ಅನುಮಾನಗೊಂಡ ಸ್ಥಳೀಯರು ನಬೀರ್​ನನ್ನು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಳ್ಳಾರಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us