Bengaluru Stampede; ದಕ್ಷರನ್ನು ಸಸ್ಪೆಂಡ್ ಮಾಡಿ ರಾಜ್ಯದ ಜನತೆಗೆ ಸರ್ಕಾರ ಕೆಟ್ಟ ಸಂದೇಶ ನೀಡಿದೆ: ಹೆಚ್ ಡಿ ಕುಮಾರಸ್ವಾಮಿ

Edited By:

Updated on: Jun 06, 2025 | 11:24 PM

ಆದರೆ ಸಸ್ಪೆನ್ಷನ್ ಒಂದು ಕಣ್ಣೊರೆಸುವ ಯತ್ನ ಎಂದು ಅಧಿಕಾರಿಗಳಿಗೂ ಗೊತ್ತು, 15-20 ದಿನಗಳ ಕಾಲ ಅವರನ್ನು ಅಮಾನತ್ತಿನಲ್ಲಿಟ್ಟು ನಂತರ ಬಡ್ತಿ ನೀಡಿ ಸೇವೆಗೆ ಕರೆಸಿಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಬೇಜಾರು ಮಾಡ್ಕೋಬೇಡಿ, ಇದೊಂದು ನಾಟಕ ಅಂತ ಸಸ್ಪೆಂಡ್ ಆಗಿರುವ ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿರುತ್ತದೆ ಎಂದು ಕೇಂದ್ರ ಸಚಿವ ಹೇಳಿದರು.

ಬೆಂಗಳೂರು, ಜೂನ್ 6: ಬುಧವಾರ ನಡೆದ ಕಾಲ್ತುಳಿತದ ಘಟನೆ ಮತ್ತು 11 ಅಮಾಯಕ ಜನರ ಸಾವಿಗೆ ಸಿದ್ದರಾಮಯ್ಯ ಸರ್ಕಾರವೇ (Siddaramaiah government) ನೇರ ಹೊಣೆಯಾಗಿದ್ದರೂ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಬಿ ದಯಾನಂದ ಮತ್ತು ಇತರ ದಕ್ಷ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಸರ್ಕಾರ ಒಂದು ಕೆಟ್ಟ ಸಂದೇಶವನ್ನು ರಾಜ್ಯದ ಜನತೆಗೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ದಯಾನಂದ್ ದಕ್ಷತೆ ಬಗ್ಗೆ ಹೇಳೋದಾದರೆ, ಹೊಸ ವರ್ಷದಾಚರಣೆ ಸಂದರ್ಭದಲ್ಲಿ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು, ಎಂಜಿ ರೋಡ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಿದ್ದರು, ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ:  ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್  

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 06, 2025 01:46 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More