72,000 ಹುದ್ದೆಗಳ ನೇಮಕಾತಿಗೆ ಕ್ರಮ: ಮಹತ್ವದ ಘೋಷಣೆ ಮಾಡಿದ ಡಿಸಿಎಂ ಪರಮೇಶ್ವರ್
Government Recruitment: ಸರ್ಕಾರದಲ್ಲಿ ಖಾಲಿ ಇರುವ 72,000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಮತ್ತು ಕಂದಾಯ ಸಚಿವರಾಗಿರುವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಆಂತರಿಕ ಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ ನಂತರ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗವನ್ನು ನಿವಾರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.
ಮುಖ್ಯಾಂಶಗಳು
- ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ
- 72,000 ಹುದ್ದೆಗಳನ್ನು ಭರ್ತಿಗೆ ಕ್ರಮ ಎಂದ ಉಪ ಮುಖ್ಯಮಂತ್ರಿ
- ಇದಕ್ಕಾಗಿಯೇ ಇಬ್ಬರು ಅಧಿಕಾರಿಗಳ ನೇಮಕ: ಡಿಸಿಎಂ ಪರಮೇಶ್ವರ್
ಬೆಂಗಳೂರು, ಜೂನ್ 26: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್ಗೂ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನು ಇದಕ್ಕಾಗಿ ನೇಮಕ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 26, 2026 12:55 PM
Follow Us

