ಅಧಿವೇಶನದಲ್ಲಿ ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು ಜೈಹಿಂದ್, ಜೈ ಕರ್ನಾಟಕ ಎಂದು ಹೇಳಿ ವಿಧಾನಸಭೆಯ ಸದನದಿಂದ ಹೊರನಡೆದರು. ಇದು ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು, (ಜನವರಿ 22): ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು ಜೈಹಿಂದ್, ಜೈ ಕರ್ನಾಟಕ ಎಂದು ಹೇಳಿ ವಿಧಾನಸಭೆಯ ಸದನದಿಂದ ಹೊರನಡೆದರು. ಇದು ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯಪಾಲರ ಈ ನಡೆ ಹಾಗೂ ವಿಧಾನಸಭೆಯ ಈ ಸನ್ನಿವೇಶ ಸದನದಲ್ಲಾದ ಈ ಬೆಳವಣಿಗೆ ಹಿಂದೆಂದೂ ಆಗಿರಲಿಲ್ಲ. ಹಿಂದೆಂದೂ ಕರ್ನಾಟಕ ವಿಧಾನಸಭೆ ಕಂಡು ಕೇಳರಿಯದ ಸಂದಿಗ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೊಟ್ಟ ಭಾಷಣವನ್ನ ಮಾಡದೇ ಕೇವಲ ಎರಡು ಸಾಲಿನಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಸದಸ್ಯರು ವಿರುದ್ಧ ಧಿಕ್ಕಾರ ಕೂಗಿದರು. ಹಾಗಾದ್ರೆ, ಸರ್ಕಾರದ ಮುಂದಿನ ನಡೆ ಏನು ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ.

