ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. 1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ.
ಬೆಂಗಳೂರು, (ಜೂನ್ 11): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. 1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ. ಅದರಲ್ಲೂ ಬೆಂಗಳೂರು ನಗರ ಜಿಲ್ಲೆಯಲ್ಲಿ 47,871 ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ. ತಾಂತ್ರಿಕ ಲೋಪ ತಡೆಯಲು ಶೀಘ್ರದಲ್ಲೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದ್ದು, ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಮಾಸಿಕ ಬರೋಬ್ಬರಿ 77 ಕೋಟಿ ರೂ. ಉಳಿತಾಯವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 11, 2026 07:25 PM
Follow Us
