Pahelgam Terrorist Attack; ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಿದೆ: ಸತೀಶ್ ಜಾರಕಿಹೊಳಿ
ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ ಕೊಂದಿರುವ ಉಗ್ರರ ಮನಸ್ಥಿತಿಯ ಬಗ್ಗೆ ಈಗಲೇ ಗೊತ್ತಾಗಲಾರದು, ಅದಕ್ಕೆ 3-4ದಿನಗಳು ಬೇಕಾಗಬಹುದು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು ಸತ್ಯವನ್ನು ಬಯಲಿಗೆಳೆಯುತ್ತವೆ, ಜಮ್ಮು ಮತ್ತು ಕಾಶ್ಮೀರ ಕಳೆದ 70 ವರ್ಷಗಳಿಂದ ವಿವಾದಿತ ಪ್ರಾಂತ್ಯ ಮತ್ತು ಸೇನೆಯ ಹತೋಟಿಯಲ್ಲಿರುವ ಪ್ರದೇಶವಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಮೈಸೂರು, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾಕರಿಂದ ನಡೆದಿರುವ 28 ಅಮಾಯಕರ ಮಾರಣಹೋಮ ಖಂಡನರ್ಹವಾದದ್ದು, ನಮ್ಮ ಸರ್ಕಾರ ಘಟನೆಯನ್ನು ಖಂಡಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (PWD minister Satish Jarkiholi) ಹೇಳಿದರು. ನಗರದಲ್ಲಿ ಮಾತಾಡಿದ ಅವರು, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರ ನಡೆಸುತ್ತಿರಲಿ, ಈ ಸಂದರ್ಭದಲ್ಲಿ ತಮ್ಮ ಸರ್ಕಾರ ಅದರ ಜೊತೆ ನಿಲ್ಲುತ್ತದೆ, ಉಗ್ರರು ಯಾರು, ಎಲ್ಲಿಂದ ಬಂದಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಅನ್ನೋದನ್ನು ಕೇಂದ್ರ ಸರ್ಕಾರ ಪತ್ತೆ ಮಾಡುತ್ತದೆ, ಕ್ರಮ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಧಾವಿಸಿದ ಸಂಸದ ತೇಜಸ್ವಿ ಸೂರ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Apr 23, 2025 01:32 PM
Latest Videos

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು

ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್

ಪಿಎಸ್ಐ ನಾಗರಾಜ್ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
