Pahelgam Terrorist Attack; ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಿದೆ: ಸತೀಶ್ ಜಾರಕಿಹೊಳಿ

Updated on: Apr 23, 2025 | 1:33 PM

ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ ಕೊಂದಿರುವ ಉಗ್ರರ ಮನಸ್ಥಿತಿಯ ಬಗ್ಗೆ ಈಗಲೇ ಗೊತ್ತಾಗಲಾರದು, ಅದಕ್ಕೆ 3-4ದಿನಗಳು ಬೇಕಾಗಬಹುದು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು ಸತ್ಯವನ್ನು ಬಯಲಿಗೆಳೆಯುತ್ತವೆ, ಜಮ್ಮು ಮತ್ತು ಕಾಶ್ಮೀರ ಕಳೆದ 70 ವರ್ಷಗಳಿಂದ ವಿವಾದಿತ ಪ್ರಾಂತ್ಯ ಮತ್ತು ಸೇನೆಯ ಹತೋಟಿಯಲ್ಲಿರುವ ಪ್ರದೇಶವಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮೈಸೂರು, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾಕರಿಂದ ನಡೆದಿರುವ 28 ಅಮಾಯಕರ ಮಾರಣಹೋಮ ಖಂಡನರ್ಹವಾದದ್ದು, ನಮ್ಮ ಸರ್ಕಾರ ಘಟನೆಯನ್ನು ಖಂಡಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (PWD minister Satish Jarkiholi) ಹೇಳಿದರು. ನಗರದಲ್ಲಿ ಮಾತಾಡಿದ ಅವರು, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರ ನಡೆಸುತ್ತಿರಲಿ, ಈ ಸಂದರ್ಭದಲ್ಲಿ ತಮ್ಮ ಸರ್ಕಾರ ಅದರ ಜೊತೆ ನಿಲ್ಲುತ್ತದೆ, ಉಗ್ರರು ಯಾರು, ಎಲ್ಲಿಂದ ಬಂದಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಅನ್ನೋದನ್ನು ಕೇಂದ್ರ ಸರ್ಕಾರ ಪತ್ತೆ ಮಾಡುತ್ತದೆ, ಕ್ರಮ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ:   ಪಹಲ್ಗಾಮ್‌ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಧಾವಿಸಿದ ಸಂಸದ ತೇಜಸ್ವಿ ಸೂರ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 23, 2025 01:32 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More