AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್: ದಿನಕ್ಕೆ 5 ಗ್ರಾಂ ಗಿಂತ ಹೆಚ್ಚು ಉಪ್ಪು ತಿಂದ್ರೆ ಹಾರ್ಟ್ ಅಟ್ಯಾಕ್ ಅಪಾಯ

ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್: ದಿನಕ್ಕೆ 5 ಗ್ರಾಂ ಗಿಂತ ಹೆಚ್ಚು ಉಪ್ಪು ತಿಂದ್ರೆ ಹಾರ್ಟ್ ಅಟ್ಯಾಕ್ ಅಪಾಯ

ವಿನಯ್​ ಕಾಶಪ್ಪನವರ್​
| Edited By: |

Updated on: Sep 23, 2026 | 5:06 PM

Share

ಅತಿಯಾದ ಉಪ್ಪಿನ ಸೇವನೆಯಿಂದ ಎದುರಾಗುವ ಆರೋಗ್ಯ ಅಪಾಯಗಳ ಬಗ್ಗೆ ಕರ್ನಾಟಕ ಆಹಾರ ಮತ್ತು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹೃದಯಾಘಾತ, ಕಿಡ್ನಿ ಸಮಸ್ಯೆ, ಸ್ಥೂಲಕಾಯದಂತಹ ತೊಂದರೆಗಳನ್ನು ತಪ್ಪಿಸಲು ಡಬ್ಲ್ಯೂಎಚ್‌ಒ ಮಾರ್ಗಸೂಚಿಗಳಂತೆ ಉಪ್ಪಿನ ಬಳಕೆ ಮಿತಿಗೊಳಿಸಲು ಸೂಚಿಸಲಾಗಿದೆ. ಇನ್ನು ಮುಂದೆ, ಸಿಗರೇಟ್ ಪ್ಯಾಕೆಟ್‌ಗಳಂತೆ ಉಪ್ಪಿನ ಪ್ಯಾಕೆಟ್‌ಗಳ ಮೇಲೂ "ಆರೋಗ್ಯಕ್ಕೆ ಹಾನಿಕಾರಕ" ಎಂಬ ಎಚ್ಚರಿಕೆ ಲೇಬಲ್ ಇರಲಿದೆ.

ಬೆಂಗಳೂರು, ಸೆ.23: ಅತಿಯಾದ ಉಪ್ಪಿನ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಕರ್ನಾಟಕ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ಇನ್ನು ಮುಂದೆ, ಉಪ್ಪಿನ ಪ್ಯಾಕೆಟ್‌ಗಳ ಮೇಲೆ “ಆರೋಗ್ಯಕ್ಕೆ ಹಾನಿಕಾರಕ” ಎಂಬ ಎಚ್ಚರಿಕೆ ಲೇಬಲ್ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಿಗರೇಟ್ ಮತ್ತು ಮದ್ಯದ ಬಾಟಲಿಗಳ ಮೇಲಿನ ಎಚ್ಚರಿಕೆಗಳ ಮಾದರಿಯಲ್ಲಿ ಈ ಹೆಜ್ಜೆ ಇಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಪ್ರಕಾರ, ಒಬ್ಬ ವ್ಯಕ್ತಿ ಪ್ರತಿದಿನ ಕೇವಲ 5 ಗ್ರಾಂ ಉಪ್ಪನ್ನು ಸೇವಿಸಬೇಕು. ಆದರೆ ಭಾರತೀಯರು ಸರಾಸರಿ 10 ರಿಂದ 12 ಗ್ರಾಂ ಉಪ್ಪನ್ನು ಸೇವಿಸುತ್ತಿದ್ದು, ಇದು ನಿಗದಿತ ಪ್ರಮಾಣಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಪಾನಿಪುರಿ, ಚೈನೀಸ್ ಫುಡ್‌ಗಳಂತಹ ಆಹಾರಗಳಲ್ಲಿ ಉಪ್ಪಿನ ಪ್ರಮಾಣ ಇನ್ನಷ್ಟು ಹೆಚ್ಚಿರುತ್ತದೆ. ಅತಿಯಾದ ಉಪ್ಪಿನ ಸೇವನೆಯು ಹೃದಯಾಘಾತ, ರಕ್ತನಾಳಗಳ ಸಮಸ್ಯೆ, ಕಿಡ್ನಿ ವೈಫಲ್ಯ, ಸ್ಥೂಲಕಾಯ, ಎಲುಬು ಮತ್ತು ಪಾರ್ಶ್ವವಾಯು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ 6-8 ಗ್ರಾಂ ಒಳಗಡೆ ಉಪ್ಪಿನ ಬಳಕೆ ಮಿತಿಗೊಳಿಸುವಂತೆ ಆಹಾರ ಮತ್ತು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೋಟೆಲ್, ರಸ್ತೆಬದಿಯ ಆಹಾರ ಮಾರಾಟಗಾರರು ಸಹ ಈ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ. ಜನರ ಆರೋಗ್ಯ ಸುಧಾರಣೆಗೆ ಈ ಕ್ರಮ ಅತ್ಯಗತ್ಯ ಎಂದು ಸರ್ಕಾರ ಹೇಳಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More