ಕರ್ನಾಟಕಕ್ಕೆ ಮತ್ತೆ ಮುಂಗಾರು ಮಳೆ ಬರಲು ಸಾಧ್ಯವಿಲ್ಲ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಭೀತಿಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶಿಸಿದೆ. ಇದನ್ನು ವಿರೋಧಿಸಲು ಕರ್ನಾಟಕ ಸರ್ಕಾರವೂ ಸಹ ಸಜ್ಜಾಗಿದೆ.
ಬೆಂಗಳೂರು,(ಆಗಸ್ಟ್.11): ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಭೀತಿಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶಿಸಿದೆ. ಇದನ್ನು ವಿರೋಧಿಸಲು ಕರ್ನಾಟಕ ಸರ್ಕಾರವೂ ಸಹ ಸಜ್ಜಾಗಿದೆ.
ಹೌದು… ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯಕ್ಕೆ ಮತ್ತೆ ಮುಂಗಾರು ಮಳೆ ಬರಲು ಸಾಧ್ಯವಿಲ್ಲ. ಈ ತಿಂಗಳಲ್ಲಿ ಅಲ್ಪ ಪ್ರಮಾಣದ ಮಳೆ ಆಗುವ ನಿರೀಕ್ಷೆ ಇದೆ. ಆದರೆ ತಮಿಳುನಾಡಿಗೆ ಮತ್ತೆ ಹಿಂಗಾರು ಮಳೆ ಬರಲಿದೆ. ತಮಿಳುನಾಡಿಗೆ ನೀರು ಹರಿಸಿದ್ರೆ ನಮ್ಮ ವ್ಯವಸಾಯಕ್ಕೆ ನೀರು ಇರಲ್ಲ. ಹೀಗಾಗಿ 12 ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ ಅಂತೆಲ್ಲಾ ಅಂಶಗಳನ್ನು ಉಲ್ಲೇಖಿಸಿ ಮೇಲ್ಮನವಿ ಸಲ್ಲಿಸಿ ವಾದ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್ ಕೊಟ್ಟ CWRC; ತಮಿಳುನಾಡಿಗೆ ಮುಂದಿನ 15ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
Published on: Aug 11, 2026 03:36 PM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

