AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ, ಆರ್ಥಿಕ ದುಸ್ಥಿತಿಯ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ  ಕಾರು ಖರೀದಿ ಮೊತ್ತ ಏರಿಕೆ

ಬರ, ಆರ್ಥಿಕ ದುಸ್ಥಿತಿಯ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

ಹರೀಶ್ ಜಿ.ಆರ್​.
| Edited By: |

Updated on:Oct 09, 2026 | 9:03 PM

Share

ಕರ್ನಾಟಕದಲ್ಲಿ ಬರಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆ ಇಲ್ಲದೇ ಬೆಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಪರಿಹಾರವಾಗಿ 2500 ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ, ಸಚಿವರು, ಸಂಸದರ ಕಾರು ಖರೀದಿ ಮೊತ್ತದ ಮಿತಿ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೌದು... ಕಾರು ಖದೀದಿಗೆ 26 ಲಕ್ಷದಿಂದ 31 ಲಕ್ಷಕ್ಕೆ ಏರಿಕೆ ಮಾಡಿ ಸರ್ಕಾರ ಒಪ್ಪಿಗೆ ನೀಡಿದೆ

ಬೆಂಗಳೂರು, (ಅಕ್ಟೋಬರ್ 9): ಕರ್ನಾಟಕದಲ್ಲಿ ಬರಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆ ಇಲ್ಲದೇ ಬೆಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಪರಿಹಾರವಾಗಿ 2500 ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ, ಸಚಿವರು, ಸಂಸದರ ಕಾರು ಖರೀದಿ ಮೊತ್ತದ ಮಿತಿ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೌದು… ಕಾರು ಖದೀದಿಗೆ 26 ಲಕ್ಷದಿಂದ 31 ಲಕ್ಷಕ್ಕೆ ಏರಿಕೆ ಮಾಡಿ ಸರ್ಕಾರ ಒಪ್ಪಿಗೆ ನೀಡಿದೆ. ರೈತರು, ಕೃಷಿಕರು, ಕೂಲಿಕಾರರಿಗೆ ಬದುಕಿನ ಚಿಂತೆಯಾಗಿದ್ದರೆ, ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಹೊಸ ವಾಹನದ ಚಿಂತೆಯೇ ಹೆಚ್ಚಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 09, 2026 09:02 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More