ಗುಪ್ತರ ಇಲಾಖೆಯಿಂದ ಅಲರ್ಟ್: ಪ್ರಿಯಾಂಕ್ ಖರ್ಗೆ ಹೆಚ್ಚಿನ ಭದ್ರತೆ ಒದಗಿಸಿದ ಸರ್ಕಾರ
ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕೆಲ ದಿನಗಳಿಂದ ಸಚಿವರಿಗೆ ಮೇಲೆಂದ ಮೇಲೆ ಬೆದರಿಕೆ ಕರೆಗಳು ಬರುತ್ತಿವೆ. ಇದರಿಂದ ರಾಜ್ಯ ಸರ್ಕಾರ ಪ್ರಿಯಾಂಕ್ ಖರ್ಗೆಗೆ ಭದ್ರತೆ ಒದಗಿಸಿದೆ. ಗುಪ್ತಚರ ಇಲಾಖೆ ಮಾಹಿತಿಯಂತೆ ಪ್ರಿಯಾಂಕ್ ಖರ್ಗೆಗೆ ಅವರಿಗೆ ಗೃಹ ಇಲಾಖೆ ಎಸ್ಕಾರ್ಟ್ ನೀಡಿದೆ
ಬೆಂಗಳೂರು, (ಅಕ್ಟೋಬರ್ 22): ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಈ ಸಂಬಂಧ ರಾಜ್ಯ ಸರ್ಕಾರವೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮ ಆಯೋಜನೆಗೆ ಪೂರ್ವನುಮತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕೆಲ ದಿನಗಳಿಂದ ಸಚಿವರಿಗೆ ಮೇಲೆಂದ ಮೇಲೆ ಬೆದರಿಕೆ ಕರೆಗಳು ಬರುತ್ತಿವೆ. ಇದರಿಂದ ರಾಜ್ಯ ಸರ್ಕಾರ ಪ್ರಿಯಾಂಕ್ ಖರ್ಗೆಗೆ ಭದ್ರತೆ ಒದಗಿಸಿದೆ. ಗುಪ್ತಚರ ಇಲಾಖೆ ಮಾಹಿತಿಯಂತೆ ಪ್ರಿಯಾಂಕ್ ಖರ್ಗೆಗೆ ಅವರಿಗೆ ಗೃಹ ಇಲಾಖೆ ಎಸ್ಕಾರ್ಟ್ ನೀಡಿದೆ
