AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ!

ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ!

ಗಣಪತಿ ಶರ್ಮಾ
|

Updated on: Aug 20, 2026 | 10:49 AM

Share

ರಾಜ್ಯದ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ 428 ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಮೂಲಸೌಕರ್ಯಗಳ ಕೊರತೆ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ಹೊಸ ಕಾಲೇಜುಗಳನ್ನು ಮಂಜೂರು ಮಾಡುವುದು ಸವಾಲಾಗಿದೆ ಎಂದು ಅವರು ಕಾಂಗ್ರೆಸ್‌ನ ಕೆ. ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಬೆಂಗಳೂರು, ಆಗಸ್ಟ್ 20: ಕರ್ನಾಟಕದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ತೀವ್ರ ಕೊರತೆಯ ಕುರಿತು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದಿದೆ. ರಾಜ್ಯದಲ್ಲಿರುವ ಒಟ್ಟು 440 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಸದನಕ್ಕೆ ಬುಧವಾರ ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್, ದಾವಣಗೆರೆಯಲ್ಲಿ ಹೊಸ ಪ್ರಥಮ ದರ್ಜೆ ಕಾಲೇಜು ತೆರೆಯುವಂತೆ ಒತ್ತಾಯಿಸಿದಾಗ ಉತ್ತರಿಸಿದ ಸಚಿವರು, ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು. ರಾಜ್ಯದಲ್ಲಿ ಪ್ರಾಂಶುಪಾಲರ ಕೊರತೆ ಮಾತ್ರವಲ್ಲದೆ, ಮೂಲಭೂತ ಸೌಕರ್ಯಗಳ ಕೊರತೆಯೂ ವ್ಯಾಪಕವಾಗಿದೆ ಎಂದು ಸಚಿವ ರಾಯರೆಡ್ಡಿ ಒಪ್ಪಿಕೊಂಡರು.

ಸದ್ಯ ಇರುವ ಕಾಲೇಜುಗಳಲ್ಲೇ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮತ್ತು ಸಿಬ್ಬಂದಿ ನೇಮಕಾತಿ ಮಾಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಹೊಸ ಕಾಲೇಜುಗಳನ್ನು ಮಂಜೂರು ಮಾಡಿದರೆ, ಅವುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಮತ್ತು ಸಿಬ್ಬಂದಿಯನ್ನು ಹೇಗೆ ಒದಗಿಸುವುದು ಎಂಬುದು ಸರ್ಕಾರದ ಮುಂದಿರುವ ಮುಖ್ಯ ಸಮಸ್ಯೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us