[lazy-load-videos-and-sticky-control id=”iNVFxdNDouE”]
ಬೆಂಗಳೂರು: ರಾಜ್ಯದಲ್ಲಿ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ.
ಕಿಮ್ಸ್ನಲ್ಲಿ ಆಕ್ಸಿಜನ್ ಪೂರೈಕೆ ಕೊರತೆ ಬಳಿಕ ಎಚ್ಚೆತ್ತ ಸರ್ಕಾರ ಕೊರೊನಾ ಸೋಂಕಿತರಿಗೆ ಹಾಗೂ ಇತರ ರೋಗಿಗಳಿಗೆ ಆಕ್ಸಿಜನ್ ಅಗತ್ಯ. ಆದ್ರೆ ಬೇಡಿಕೆಗೆ ತಕ್ಕಂತೆ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಸುವ ಸಿಲಿಂಡರ್ ಅಭಾವ ಹೆಚ್ಚಾಗಿದೆ. ಹೀಗಾಗಿ ಕೈಗಾರಿಕೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಲು ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಆದೇಶ ನೀಡಿದ್ದಾರೆ.
ಕೈಗಾರಿಕೆಗೆ ಉಪಯೋಗಿಸುವ ಆಕ್ಸಿಜನ್ ಸಿಲಿಂಡರ್ ಬೇಕಷ್ಟಿದೆ. ಅವುಗಳನ್ನು ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಿ ಎಂದು ಆದೇಶಿಸಿದ್ದಾರೆ. ಕೆಲ ಕೈಗಾರಿಕೆ ಕಂಪನಿಗಳು ತಮ್ಮ ಆಕ್ಸಿಜನ್ ಸಿಲಿಂಡರ್ಗಳನ್ನ ನೀಡಲು ಹಿಂದೇಟು ಹಾಕುವ ಸಾಧ್ಯತೆ ಇದ್ದು, ಸರ್ಕಾರ ಮೊದಲೇ ಖಡಕ್ ಎಚ್ಚರಿಕೆ ನೀಡಿದೆ.
Published On - 8:15 am, Wed, 26 August 20