ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ

Edited By:

Updated on: Feb 18, 2026 | 11:27 AM

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶ ಮತ್ತು ಪ್ರತಿಕ್ರಿಯೆ ಪಡೆಯುವಿಕೆಗೆ ನಿರ್ಬಂಧ ಹೇರಿ ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ನಿಗದಿತ ಸ್ಥಳದಲ್ಲಿ ಮಾತ್ರ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಹತ್ತಿಕ್ಕುವ ಪ್ರಯತ್ನ ಎಂದು ಪರೊಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 18: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ.

ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ. ಮಾಧ್ಯಮಗಳು ಜನರ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಕಳೆದ ವಾರ ವಿಧಾನಸೌಧದಲ್ಲಿ ನಡೆದ ಭದ್ರತಾ ಲೋಪಗಳನ್ನು (ಚಿನ್ನ ಕಳ್ಳತನದಂತಹ ಘಟನೆಗಳು) ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ನೆಪವಾಗಿ ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ತನ್ನ ಲೋಪಗಳನ್ನು ಸರಿಪಡಿಸಿಕೊಳ್ಳುವ ಬದಲು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುತ್ತಿರುವುದು ಸರಿಯಲ್ಲ ಎಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಇದು ಕಾಂಗ್ರೆಸ್ ಪಕ್ಷವು ತುರ್ತು ಪರಿಸ್ಥಿತಿಯ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಇತಿಹಾಸವನ್ನು ನೆನಪಿಸುತ್ತದೆ ಎಂದು ಅವರು ಉಲ್ಲೇಖಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More