AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ ನಿರ್ಧಾರ ನಮ್ಮದಲ್ಲ, FSSAI ಸೂಚನೆ: ಆಹಾರ ಇಲಾಖೆ ಸ್ಪಷ್ಟನೆ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ ನಿರ್ಧಾರ ನಮ್ಮದಲ್ಲ, FSSAI ಸೂಚನೆ: ಆಹಾರ ಇಲಾಖೆ ಸ್ಪಷ್ಟನೆ

ಅಕ್ಷಯ್​ ಪಲ್ಲಮಜಲು​​
|

Updated on: Aug 15, 2026 | 7:19 AM

Share

ರಾಜ್ಯದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ವಿಚಾರವು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ಸುಪ್ರೀಂ ಕೋರ್ಟ್‌ನ ಆದೇಶದ ಪಾಲನೆಯಾಗಿದೆ. ಇದು ರಾಜ್ಯ ಸರ್ಕಾರದ ಸ್ವಂತ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ FSSAI ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಬೆಂಗಳೂರು, ಆ.15: ರಾಜ್ಯದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧದ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಈ ನಿರ್ಧಾರವು ರಾಜ್ಯ ಆಹಾರ ಇಲಾಖೆಯದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಾಸ್ತವವಾಗಿ, ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಎಲ್ಲಾ ರಾಜ್ಯಗಳಿಗೆ ಈ ನಿಷೇಧವನ್ನು ಜಾರಿಗೊಳಿಸುವಂತೆ ಸೂಚಿಸಿದೆ. ಗುಟ್ಕಾ, ತಂಬಾಕು ಮತ್ತು ನಿಕೋಟಿನ್ ಅಂಶವಿರುವ ಪಾನ್ ಮಸಾಲಾ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ FSSAI ಆದೇಶ ಹೊರಡಿಸಿದೆ. ಇದು ಸುಪ್ರೀಂ ಕೋರ್ಟ್‌ನ 2016ರ ಸೆಪ್ಟೆಂಬರ್ 23ರ ಆದೇಶವನ್ನು ಆಧರಿಸಿದ್ದು, ಎಲ್ಲಾ ರಾಜ್ಯಗಳು ಇದನ್ನು ಪಾಲಿಸಬೇಕು. ಪ್ರತಿ ವರ್ಷ ಇಂತಹ ಅಧಿಸೂಚನೆಗಳನ್ನು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ತಂಬಾಕು ಮತ್ತು ಪಾನ್ ಮಸಾಲಾವನ್ನು ಪ್ರತ್ಯೇಕ ಪ್ಯಾಕೆಟ್‌ಗಳಲ್ಲಿ ಮಾರಾಟ ಮಾಡುವ ಮೂಲಕ ಮಿಶ್ರಣ ಮಾಡಿಕೊಳ್ಳಲು ಅವಕಾಶ ನೀಡುವ ಪದ್ಧತಿಗೂ ಸಹ ನಿಷೇಧವಿದೆ. ಹೀಗೆ ಮಾಡಿದರೂ ಅಥವಾ ಎರಡನ್ನೂ ಒಟ್ಟಿಗೆ ಮಾರಾಟ ಮಾಡಿದರೂ ಕ್ರಮ ತೆಗೆದುಕೊಳ್ಳಲಾಗುವುದು. ಕೇಂದ್ರದ ಈ ಸೂಚನೆಯಂತೆ ಕರ್ನಾಟಕದಲ್ಲೂ ಆದೇಶ ಜಾರಿಗೆ ತರಲಾಗಿದ್ದು, ರಾಜ್ಯ ಆಹಾರ ಸುರಕ್ಷತಾ ಆಯುಕ್ತರಿಗೆ FSSAI ನಿರ್ದೇಶನ ನೀಡಿದೆ. ಇದು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡ ಪ್ರಮುಖ ಕ್ರಮವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us