ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ಬ್ರೇಕ್: ತನಿಖೆಗೆ ಸಹಕರಿಸದ ಹಿನ್ನೆಲೆ ಕಠಿಣ ಕ್ರಮ

Edited By:

Updated on: Sep 20, 2026 | 5:16 PM

ಕರ್ನಾಟಕದಲ್ಲಿ ಫೈಜರ್ ಕಂಪನಿಯ ಔಷಧ ಸರಬರಾಜಿಗೆ ತಾತ್ಕಾಲಿಕ ತಡೆ ವಿಧಿಸಲಾಗಿದೆ. ನಕಲಿ ಔಷಧ ಜಾಲದ ತನಿಖೆಗೆ ಕಂಪನಿ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಔಷಧ ಆಡಳಿತ ಈ ನಿರ್ಧಾರ ಕೈಗೊಂಡಿದೆ. ಕ್ಯಾನ್ಸರ್ ರೋಗಿಗಳಂತಹ ಗಂಭೀರ ಪ್ರಕರಣಗಳಲ್ಲಿ ಬಳಸುವ ದುಬಾರಿ ಔಷಧಗಳನ್ನು ನಕಲಿ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಫೈಜರ್ ಸಹಕಾರ ನೀಡದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 20: ನಕಲಿ ಔಷಧ ಜಾಲದ ಕುರಿತು ನಡೆಯುತ್ತಿರುವ ತನಿಖೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಔಷಧ ಕಂಪನಿ ಫೈಜರ್‌ನ ಉತ್ಪನ್ನಗಳ ಮಾರಾಟ ಮತ್ತು ಸರಬರಾಜಿಗೆ ಕರ್ನಾಟಕದಲ್ಲಿ ತಾತ್ಕಾಲಿಕ ತಡೆ ವಿಧಿಸಲಾಗಿದೆ. ಔಷಧ ಆಡಳಿತ ವಿಭಾಗವು ಫೈಜರ್ ಕಂಪನಿ ಬಳಿ ತನಿಖೆಗೆ ಅಗತ್ಯ ಮಾಹಿತಿ ಮತ್ತು ಸಹಕಾರ ನೀಡುವಂತೆ ಕೇಳಿತ್ತು. ಆದರೆ, ಕಂಪನಿಯು ಈ ಮನವಿಗೆ ಸ್ಪಂದಿಸಿಲ್ಲ. ನಕಲಿ ಔಷಧ ಜಾಲವು ಫೈಜರ್‌ನ ದುಬಾರಿ ಆಂಟಿಬಯಾಟಿಕ್‌ಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿತ್ತು. ಈ ಸಂಬಂಧ ಫೈಜರ್‌ನ ಡಿಸ್ಟ್ರಿಬ್ಯೂಟರ್‌ಗಳು ಮತ್ತು ಔಷಧ ತಯಾರಿಕೆಯ ಮಾಹಿತಿ ಅಗತ್ಯವಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 20, 2026 05:14 PM
Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More