ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ ವಿಭಾಗೀಯ ಪೀಠ

Updated on: Aug 07, 2026 | 12:29 PM

ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಶ್ನಿಸಿ ಆರ್.ಕೆ. ಗುರುಪ್ರಸಾದ್ ಸಲ್ಲಿಸಿದ್ದ ಪಿಐಎಲ್ ಕುರಿತು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಯೋಜನೆಯಿಂದ ಹೆಬ್ಬಾಳ ಕೆರೆಗೆ ನೀರಿನ ಹರಿವಿಗೆ ಅಡಚಣೆಯಾಗಲಿದೆಯೇ ಹಾಗೂ ಈ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ ಎಂದು ನ್ಯಾಯಾಲಯ ಮಾಹಿತಿ ಕೇಳಿದೆ. ಬಿಡಿಎ, ಬಿಎಂಎಲ್​ಟಿಎ, ಕೆರೆ ಸಂರಕ್ಷಣಾ ಪ್ರಾಧಿಕಾರ ಹಾಗೂ ರಿತ್ವಿಕ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು, ಆಗಸ್ಟ್​​ 07: ಪ್ರಸ್ತಾಪಿತ ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಆರ್.ಕೆ. ಗುರುಪ್ರಸಾದ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ಕುರಿತು ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಯೋಜನೆಯಿಂದ ಹೆಬ್ಬಾಳ ಕೆರೆಗೆ ನೀರಿನ ಹರಿವಿಗೆ ಅಡಚಣೆ ಉಂಟಾಗುತ್ತದೆಯೇ ಮತ್ತು ಈ ಬಗ್ಗೆ ಯಾವುದೇ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವು ಸ್ಪಷ್ಟೀಕರಣ ಕೇಳಿದೆ. ಜೊತೆಗೆ ಹೈಕೋರ್ಟ್ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ), ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ಬಿಎಂಎಲ್​ಟಿಎ) ಮತ್ತು ಕೆರೆ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಯೋಜನೆಗೆ ಸಂಬಂಧಿಸಿದ ರಿತ್ವಿಕ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೂ ನೋಟಿಸ್ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 07, 2026 12:29 PM
Loading...
Unable to load recommendations.
Follow Us