Live: ಹೃದಯಾಘಾತ ತಡೆ ಮಾರ್ಗಸೂಚಿ ಬಿಡುಗಡೆಗೆ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ

Updated on: Jul 07, 2025 | 1:15 PM

ಹಾಸನ ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ತಡೆಗೆ ಕರ್ನಾಟಕ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಲು ಮುಂದಾಗಿದೆ. ಈ ವಿಚಾರವಾಗಿ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಆರೋಗ್ಯ ಸಚಿವರ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಜುಲೈ 7: ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಜ್ಞರ ಜತೆ ಸಭೆ ನಡೆಸಿದ್ದಾರೆ. ಹಾಸನದ ಹೃದಯಾಘಾತ ಪ್ರಕರಣಗಳ ಸಂಬಂಧ ಈಗಾಗಲೇ ತಜ್ಞರು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಆಧಾರದಲ್ಲಿ, ಹೃದಯಾಘಾತ ತಡೆಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯಾಘಾತ ತಡೆ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲು ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ