ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ; ಸಚಿವ ಯುಟಿ ಖಾದರ್

Edited By:

Updated on: Jun 25, 2026 | 2:45 PM

ಮುಖ್ಯಾಂಶಗಳು

  • ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ
  • 64.84 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ
  • ಮಕ್ಕಳಿಗೆ ಲಸಿಕೆ ಹಾಕಿಸಲು ಸಚಿವ ಯುಟಿ ಖಾದರ್ ಮನವಿ

ಜೂನ್ 28ರಂದು ನಡೆಯಲಿರುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಹಕಾರ ನೀಡುವಂತೆ ಆರೋಗ್ಯ ಸಚಿವ ಖಾದರ್ ಮನವಿ ಮಾಡಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪೋಲಿಯೋ ವೈರಸ್ ಇರುವ ಕಾರಣ, ಭಾರತದಲ್ಲಿ ಮತ್ತೆ ಪೋಲಿಯೋ ಹರಡದಂತೆ ಮಕ್ಕಳನ್ನು ಲಸಿಕೆ ಹಾಕಿಸುವುದು ಅತ್ಯಗತ್ಯ. ರಾಜ್ಯಾದ್ಯಂತ ಲಕ್ಷಾಂತರ ಮಕ್ಕಳಿಗೆ ಲಸಿಕೆ ನೀಡಲು ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು, ಜೂನ್​​ 25: ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ. ಹೀಗಾಗಿ ರಾಜ್ಯದ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಮನವಿ ಮಾಡಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ವೈರಸ್ ಸಕ್ರಿಯವಾಗಿರುವ ಕಾರಣ, ಭಾರತದಲ್ಲಿ ಮತ್ತೆ ರೋಗ ಹರಡುವ ಸಾಧ್ಯತೆ ತಡೆಯಲು ಲಸಿಕೆ ಅತ್ಯಗತ್ಯ ಎಂದರು. ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರೋತ್ಸಾಹ, ಆರೋಗ್ಯ ಇಲಾಖೆ, ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತರು, ಎನ್‌ಜಿಒಗಳು ಮತ್ತು ಶಿಕ್ಷಣ ಇಲಾಖೆಯ ಅವಿರತ ಶ್ರಮದಿಂದ ಸಾಧ್ಯವಾಗಿದೆ ಎಂದು ಹೇಳಿದರು. ಈ ಬಾರಿ ರಾಜ್ಯದಲ್ಲಿ ಸುಮಾರು 64.84 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ರಾಜ್ಯವನ್ನು ಪೋಲಿಯೋ ಮುಕ್ತವಾಗಿರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More