ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಬಿಸಿಲಿನ ಝಳದಿಂದ ಪಾರಾಗಲು ಜನರ ನಾನಾ ಕಸರತ್ತು
ಕರ್ನಾಟಕದ ಐದು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುತ್ತಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿದೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಮನೆ ಮೇಲ್ಛಾವಣಿ ಮೇಲೆ ನೀರು ತುಂಬಿದ ಟಾರ್ಪಾಲ್ ಹಾಕುವುದು, ಹಣ್ಣಿನ ರಸ ಸೇವಿಸುವುದು ಸೇರಿದಂತೆ ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಬೆಂಗಳೂರು, ಏಪ್ರಿಲ್ 19: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಐದು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಜನರು ಬಿಸಿಲಿನಿಂದ ತತ್ತರಿಸಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ದಾಖಲಾಗಿದೆ. ಮನೆಯಲ್ಲಿದ್ದರೂ ಫ್ಯಾನ್ ಮತ್ತು ಕೂಲರ್‌ಗಳಿಂದ ಬಿಸಿ ಗಾಳಿ ಬರುತ್ತಿರುವುದರಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಮಧ್ಯಾಹ್ನದ ವೇಳೆ ಜನರು ಮನೆಯಿಂದ ಹೊರಬರಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದರ್ ಜಿಲ್ಲೆಯ ಮರಕಲ್ ಗ್ರಾಮದ ನಿವಾಸಿಗಳು ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಮನೆಗಳ ಮೇಲ್ಛಾವಣಿಯ ಮೇಲೆ ಟಾರ್ಪಾಲ್ ಹಾಕಿ ನೀರು ತುಂಬಿಸುವ ಮೂಲಕ ಮನೆಯನ್ನು ತಂಪಾಗಿರಿಸಿಕೊಳ್ಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

