ರಾಹುಲ್ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಬೈಕ್ ಟ್ಯಾಕ್ಸಿ ರೈಡರ್ಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಈ ಹಿಂದೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು. ಆ ವೇಳೆ ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಅದನ್ನೇ ನಂಬಿ ಜೀವನ ನಡೆಸುತ್ತಿದ್ದ ರೈಡರ್ಗಳು ಸಂತಸ ವ್ಯಕ್ತಪಡಿಸಿದ್ದಾರೆ. 15 ರಾಜ್ಯಗಳಲ್ಲಿ ವೈಟ್ ಪ್ಲೇಟ್ ಬೈಕ್ ಟ್ಯಾಕ್ಸಿಗಳಿಗೆ ಈಗಾಲೇ ಅನುಮತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿಯನ್ನು ಸಾರಿಗೆ ಸಚಿವರಿಗೆ, ಕೋರ್ಟ್ಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಜನವರಿ 23: ಬೈಕ್ ಟ್ಯಾಕ್ಸಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆ ಅದನ್ನೇ ನಂಬಿ ಜೀವನ ನಡೆಸುತ್ತಿದ್ದವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ನಮ್ಮ ಹೋರಾಕ್ಕೆ ಫಲ ಸಿಕ್ಕಿದೆ, ಕೋರ್ಟ್ ಹೇಳಿರುವಂತೆ ರೂಲ್ಸ್ ಫ್ರೇಮ್ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಬೈಕ್ ಟ್ಯಾಕ್ಸಿ ವಿಚಾರವಾಗಿ ಈ ಹಿಂದೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದೆವು. ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ವೈಟ್ ನಂಬರ್ ಪ್ಲೇಟ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಯಬೇಕು, ಟ್ಯಾಕ್ಸ್ ಪಾವತಿಸಲು ನಾವು ರೆಡಿ ಇದ್ದೇವೆ. 15 ರಾಜ್ಯಗಳಲ್ಲಿ ವೈಟ್ ಪ್ಲೇಟ್ ಬೈಕ್ ಟ್ಯಾಕ್ಸಿಗಳಿಗೆ ಈಗಾಲೇ ಅನುಮತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿಯನ್ನು ಸಾರಿಗೆ ಸಚಿವರಿಗೆ, ಕೋರ್ಟ್ಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 23, 2026 05:33 PM
Follow Us
