ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸಿಎಂ ಹಾಗೂ ಅವರ ಪತ್ನಿ ಅಲ್ಲದೇ ಲೋಕಾಯಯಕ್ತ ಪೊಲಿಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ, ದೇವರಾಜ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನ ಮುಂದೂಡಿದೆ.
ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸಿಎಂ ಹಾಗೂ ಅವರ ಪತ್ನಿ ಅಲ್ಲದೇ ಲೋಕಾಯಯಕ್ತ ಪೊಲಿಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ, ದೇವರಾಜ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನ ಮುಂದೂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ಭೂ ಹಗರಣ ಪ್ರಕರಣದಲ್ಲಿ, ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿತ್ತು. ಇದನ್ನು ಪ್ರಶ್ನಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸಂಬಂಧ ಇದೀಗ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
