ಮರದ ಕೊಂಬೆ ಬಿದ್ದು ಅಂಗವೈಕಲ್ಯಕ್ಕೆ ತುತ್ತಾದ ಯುವಕ: ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಮರದ ಕೊಂಬೆ ಬಿದ್ದು ಶೇ.85ರಷ್ಟು ಅಂಗವೈಕಲ್ಯಕ್ಕೆ ತುತ್ತಾದ ಜಿ. ಚಂದನ್ ಅವರಿಗೆ ಕರ್ನಾಟಕ ಹೈಕೋರ್ಟ್ ₹2.77 ಕೋಟಿ ಪರಿಹಾರ ನೀಡಲು ಆದೇಶಿಸಿದೆ. ಮರಗಳ ನಿರ್ವಹಣೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವೈಫಲ್ಯಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು, ಪರಿಹಾರ ನೀಡುವಂತೆ ಸೂಚಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಪೀಠ ಈ ತೀರ್ಪು ನೀಡಿದೆ.
ಬೆಂಗಳೂರು, ಸೆಪ್ಟೆಂಬರ್ 29: ನಗರದಲ್ಲಿ ಮರದ ಕೊಂಬೆ ಬಿದ್ದು ಅಂಗವೈಕಲ್ಯಕ್ಕೆ ತುತ್ತಾದ ಜಿ. ಚಂದನ್ ಅವರಿಗೆ ಕರ್ನಾಟಕ ಹೈಕೋರ್ಟ್ 2.77 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಈ ಘಟನೆಯಲ್ಲಿ ಮರಗಳ ನಿರ್ವಹಣೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ (GBA) ತೋರಿದ ವೈಫಲ್ಯಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನಗರದಲ್ಲಿ ಮರಗಳ ಸಮರ್ಪಕ ನಿರ್ವಹಣೆ ಮಾಡದ ಮಹಾನಗರ ಪಾಲಿಕೆಯು ಈ ಘಟನೆಗೆ ಹೊಣೆ ಹೊರಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಈ ಕುರಿತು ಆದೇಶ ಹೊರಡಿಸಿದೆ. 2024ರ ಮಾರ್ಚ್ 7ರಂದು ಬೆಂಗಳೂರಿನ ಗುಡ್ ಶೆಫರ್ಡ್ ಕಾನ್ವೆಂಟ್ ಬಳಿ ಈ ದುರಂತ ಸಂಭವಿಸಿತ್ತು. ನಾಗರಬಾವಿ ನಿವಾಸಿ ಜಿ. ಚಂದನ್ ಗಂಭೀರ ಗಾಯಗೊಂಡು, ಶೇಕಡ 85ರಷ್ಟು ಅಂಗವೈಕಲ್ಯಕ್ಕೆ ತುತ್ತಾಗಿದ್ದರು.
ಕರ್ನಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
