ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್, ಕೋರ್ಟ್ ಹೇಳಿದ್ದೇನು?

Updated on: Sep 16, 2025 | 3:53 PM

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂಕು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ಅಸಿಂಧುಗೊಳಿಸಿದೆ. ಅಲ್ಲದೇ ಮರು ಮತ ಎಣಕೆಗೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಹೈಕೋರ್ಟ್ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಮಧ್ಯಂತರ ತಡೆ ನೀಡಿದೆ. ಇದರಿಂದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಬೆಂಗಳೂರು,(ಸೆಪ್ಟೆಂಬರ್.16): ಮಾಲೂರು ವಿಧಾನಸಭಾ ಕ್ಷೇತ್ರದ (Malur assembly constituency) ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ (High Court) ಮಹತ್ವದ ತೀರ್ಪು (important verdict) ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ (Congress MLA KY Nanjegowda) ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್​ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ ಪುರಸ್ಕರಿಸಿ 1 ತಿಂಗಳುಗಳ ಕಾಲ ಸುಪ್ರೀಂಕೋರ್ಟ್​ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಇದರಿಂದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.