ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ: ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಪರಮೇಶ್ವರ್
ಬೆಂಗಳೂರಿನ ಬಿಟಿಎಮ್ ಲೇಔಟ್ನಲ್ಲಿ ಯುವತಿ ಮೇಲೆ ದೌರ್ಜನ್ಯ ಪ್ರಕರಣ ಸಂಬಂಧ ಸೋಮವಾರ ನೀಡಿದ್ದ ಹೇಳಿಕೆಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ವಿಷಾದ ವ್ಯಕ್ತಪಡಿಸಿದ್ದಾರೆ. ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ, ಪರಮೇಶ್ವರ್ ಹೇಳಿದ್ದೇನು? ಅವರ ಸ್ಪಷ್ಟನೆ ಏನು? ಇಲ್ಲಿದೆ ನೋಡಿ.
ಬೆಂಗಳೂರು, ಏಪ್ರಿಲ್ 8: ಯುವತಿ ಮೇಲೆ ದೌರ್ಜನ್ಯ ಪ್ರಕರಣ ವಿಚಾರವಾಗಿ ನೀಡಿದ್ದ ಹೇಳಿಕೆಯನ್ನು ಸರಿಯಾಗಿ ಅರ್ಥೈಸಿಲ್ಲ, ತಪ್ಪಾಗಿ ಬಿಂಬಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಮಹಿಳೆಯರ ರಕ್ಷಣೆ ಪರ ಇರುವವನು. ನಾನು ಗೃಹಸಚಿವನಾದಾಗ ನಿರ್ಭಯ ಯೋಜನೆ ಅನುಷ್ಠಾನ ಮಾಡಿದ್ದೇನೆ. ಮಹಿಳೆಯರ ಪರ ಸಾಕಷ್ಟು ಕಾರ್ಯಕ್ರಮ ಮಾಡಿದ್ದೇವೆ. ನನ್ನ ಹೇಳಿಕೆಯನ್ನು ತಿರುಚಿದ್ದು ಸರಿಯಲ್ಲ. ಯಾರಿಗೆ ತೊಂದರೆ ಆದ್ರೂ ಇಲಾಖೆ ಹೊಣೆ ಮಾಡಿದ್ದೇನೆ. ನನ್ನ ಹೇಳಿಕೆಯಿಂದ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಇದನ್ನೂ ಓದಿ: ಯುವತಿಗೆ ಲೈಂಗಿಕ ದೌರ್ಜನ್ಯ: ದೊಡ್ಡ ನಗರದಲ್ಲಿ ಇಂತಹ ಘಟನೆಗಳು ಆಗುತ್ತವೆ ಎಂದ ಪರಮೇಶ್ವರ
Latest Videos

