ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಚುನಾವಣೆ ಸಮಯದಲ್ಲಿ ಹೇಳಿರಲಿಲ್ಲ. ಹೀಗಾಗಿ ಮುಂದೆ ಆ ರೀತಿ ತಿದ್ದುಪಡಿ ಮಾಡುವುದಾದರೆ ಆ ಬಗ್ಗೆ ಸಾಕಷ್ಟು ಸಮಾಲೋಚನೆ ಮಾಡಬೇಕಾಗುತ್ತದೆ. ಅದರ ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಗಮನಿಸಬೇಕಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಹಾಗೆಂದು ಅನೇಕ ಮಂದಿ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದಾರೆ ಎಂದೂ ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ 25: ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದರು.