ಮೆಡಿಕಲ್ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ
ಗೃಹ ಸಚಿವ ಡಾ. ಜಿ ಪರಮೇಶ್ವರ್ ಬುಧವಾರ ಅನೇಕ ವಿಚಾರಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಹಿತಿ ನೀಡಿದ್ದು, ಡ್ರಗ್ಸ್ ದಂಧೆ ಮಟ್ಟ ಹಾಕುವ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು, ಮೆಡಿಕಲ್ ಶಾಪ್ಗಳಲ್ಲಿ ಸಹ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಇದೆ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 18: ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ದಂಧೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದಾಗ್ಯೂ, ಮೆಡಿಕಲ್ ಸ್ಟೋರ್ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಇದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್ಗಳಲ್ಲಿ ಡ್ರಗ್ಸ್ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ಬಗ್ಗೆ ಇಂದು ಸಭೆ ನಡೆಸುತ್ತೇವೆ ಎಂದರು.
ಮೆಡಿಕಲ್ ಸ್ಟೋರ್ಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ. ಗಾಂಜಾ ಹಾಗೂ ಇತರೆ ಡ್ರಗ್ಸ್ ನಿಯಂತ್ರಣ ಮಾಡಿದ್ದೇವೆ. ಪ್ರಕರಣಗಳು ಕಡಿಮೆ ಆಗಿವೆ ಎಂದು ಪರಮೇಶ್ವರ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos